ಹೆಬ್ರಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಬ್ರಿ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ನರೇಂದ್ರ ಎಸ್. ಮರಸಣಿಗೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜಾವಣಿ ಪತ್ರಿಕೆಯ ವರದಿಗಾರ ಸುಕುಮಾರ್ ಮುನಿಯಾಲು ಆಯ್ಕೆಯಾಗಿದ್ದಾರೆ. ಗುರುವಾರ ಹೆಬ್ರಿಯ ಅನಂತ ಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಕೋಶಾಧಿಕಾರಿಯಾಗಿ ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ಸುಮಲತಾ ಹೆಬ್ಬಾರ್, ಉಪಾಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಕೆ. ಸಂಜೀವ ಆರ್.ಡಿ., ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಉದಯವಾಣಿ ಪತ್ರಿಕೆಯ ವರದಿಗಾರ ಉದಯಕುಮಾರ್ ಶೆಟ್ಚಿ ಹಾಗೂ ಪಬ್ಲಿಕ್ ಆ್ಯಪ್ ವರದಿಗಾರ ಶ್ರೀದತ್ತ ಶೆಟ್ಟಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸಹಕರಿಸಿದರು.


























