ಬೆಂಗಳೂರು : ನಾರಾಯಣ ಗುರು ಅಭಿವೃದ್ಧಿ ನಿಗಮದ ಮೊದಲ ಆಡಳಿತ ಮಂಡಳಿ ಸಭೆಯು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಕಚೇರಿಯಲ್ಲಿ ನಡೆಯಿತು. ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಎನ್. ಕೊಲೆರ, ಇಲಾಖೆಯ ಆಯುಕ್ತರಾದ ದಯಾನಂದ್ ಕೆ.ಎ., ಹಣಕಾಸು ಇಲಾಖೆಯ ಉಪ ಕಾರ್ಯದರ್ಶಿ ಮಂಜುಳಾ ನಟರಾಜನ್, ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಟರಾಜ್ ಜಿ.ಆರ್., ಕಂಪನಿ ಸೆಕ್ರೆಟರಿ ಶೀಲಾ ಅರವಿಂದ್ ಉಪಸ್ಥಿತರಿದ್ದರು.
ನಾರಾಯಣ ಗುರು ಅಭಿವೃದ್ಧಿ ನಿಗಮದ ಮೊದಲ ಆಡಳಿತ ಮಂಡಳಿ ಸಭೆ


























