ಜಿಲ್ಲಾ ಆರೋಗ್ಯಾಧಿಕಾರಿಯನ್ನು ಅಬಕಾರಿ ಡಿಸಿಯಾಗಿ ನಿಯೋಜನೆ

ಬೆಂಗಳೂರು : ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ. ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದ್ದು ಸಿದ್ದರಾಮಯ್ಯನವರು ಇಂದ್ರಿಯ ವಶವಾಗಿ ಆಡಳಿತದ ಹದ ಕಳೆದುಕೊಂಡಿರುವುದಕ್ಕೆ ನಿದರ್ಶನ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಲೇವಡಿ ಮಾಡಿದ್ದಾರೆ.

ಯಾವ ವ್ಯಾಮೋಹ
ಅಬಕಾರಿ ಇಲಾಖೆಯಲ್ಲಿ ನಡೆದಿರುವ 6000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ ? ಅಥವಾ ನಿಮ್ಮಿಂದ ಮಾಡಿಸುತ್ತಾರಾ ? ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆಯಿಂದ ಸಾರ್ವಜನಿಕರು ನರಳುತ್ತಿರುವಾಗ ಜಿಲ್ಲಾ ವೈದ್ಯಾಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ನಿಯೋಜನೆ ಮಾಡುವಂತೆ ನೀವೇ ಖುದ್ದಾಗಿ ನಿರ್ದೇಶನ ನೀಡುತ್ತೀರೆಂದರೆ ಅದೆಂಥ ಒತ್ತಡ ಹಾಗೂ ವ್ಯಾಮೋಹ ನಿಮ್ಮನ್ನು ಕಾಡುತ್ತಿರಬಹುದು ? ಅಥವಾ ಅಧಿಕಾರ ಹಸ್ತಾಂತರದ ಚಿಂತೆ ನಿಮ್ಮನ್ನು ಆವರಿಸಿದೆಯೋ ? ಎಂದು ಸುನಿಲ್‌ ಕುಮಾರ್‌ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.



































































































error: Content is protected !!
Scroll to Top