ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಮೊಕ್ತೇಸರ ದಿವಾಕರ ಪೂಜಾರಿ ನಿಧನ

ಕಾರ್ಕಳ : ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಮೊಕ್ತೇಸರ, ಪೊಸ್ರಾಲು ಬಿಲ್ಲವ ಸಂಘದ ಅಧ್ಯಕ್ಷ ದಿವಾಕರ ಪೂಜಾರಿ (60) ಅವರು ಫೆ. 15ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಕಾಸರಗೋಡಿಗೆ ದೈವಪಾತ್ರಿಯಾಗಿ ಸೇವೆ ಸಲ್ಲಿಸಲು ತೆರಳಿದ್ದ ವೇಳೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮುಂಡ್ಕೂರಿನ ಜಾರಿಗೆಕಟ್ಟೆಯಲ್ಲಿ ಕೊರಗಜ್ಜ, ಕೊರಗರ ಪಂಜುರ್ಲಿ ಸಹಿತ ವಿವಿಧ ಪರಿವಾರ ಶಕ್ತಿಗಳ ಕೇಂದ್ರಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಿದ್ದು ಕ್ಷೇತ್ರದಲ್ಲಿ ನಿರಂತರ ಕೋಲ, ಅಗೇಲು ಸೇವೆಗಳು ನಡೆಯುತ್ತಿದ್ದವು. ಕ್ಷೇತ್ರದಲ್ಲಿ‌ ಕ್ರೈಸ್ತ, ಮುಸ್ಲಿಂ ಸಮಾಜದ ಬಂಧುಗಳೂ ಹರಕೆಯ ಕೋಲ‌ ಹಾಗೂ ಅಗೇಲು ಸೇವೆ ನೀಡುತ್ತಿದ್ದು ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರ ಕಾರಣಿಕ ಕ್ಷೇತ್ರವೆನಿಸಿತ್ತು.

ಮೃತರ ನಿಧನಕ್ಕೆ‌ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸೇರಿದಂತೆ ಮೊದಲಾದ ಗಣ್ಯರು ಸಂತಾಪ ಸೂಚಿಸಿದ್ದಾರೆ.









































































































error: Content is protected !!
Scroll to Top