ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ – ಚಾಲಕ ಅಪಾಯದಿಂದ ಪಾರು

ಕಾರ್ಕಳ : ವಿದ್ಯುತ್‌ ಕಂಬಕ್ಕೆ ಕಾರೊಂದು ಡಿಕ್ಕಿಯಾಗಿ ಚಾಲಕ ಪವಾಡ ಸದೃಶ್ಯವಾಗಿ ಪಾರಾದ ಘಟನೆ ಜೋಡುರಸ್ತೆಯಲ್ಲಿ ಫೆ. 23ರಂದು ನಡೆದಿದೆ. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಸಾಗುತ್ತಿದ್ದ ಮಾರುತಿ ಇಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ವಿದ್ಯುತ್‌ ಕಂಬ ಕಾರಿಗೆ ವಾಲಿದ್ದು, ಕಾರಿನ ಮುಂಭಾಹ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್‌ ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರಿನ ಟಯರ್‌ಗೆ ಕಲ್ಲು ಬಡಿದ ಪರಿಣಾಮ ಸ್ಫೋಟಗೊಂಡು ಅಪಘಾತಕ್ಕೀಡಾಗಿದೆ ಎನ್ನಲಾಗುತ್ತಿದೆ.































































error: Content is protected !!
Scroll to Top