ಸಿಎಂ ಸಿದ್ದರಾಮಯ್ಯ ಕಾರ್ಕಳ ಭೇಟಿ – ಭರದ ಸಿದ್ಧತೆ

600 ಕ್ಕೂ ಅಧಿಕ ಪೊಲೀಸರ ನಿಯೋಜನೆ

ಕಾರ್ಕಳ : ನಾಡಿನ ದೊರೆ ನಾಳೆ (ಫೆ. 25) ಕಾರ್ಕಳ ಆಗಮನ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಸಿಎಂ ಅವರು ಬುಧವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. 11 :10ಕ್ಕೆ ಮಂಗಳೂರಿನಿಂದ ಹೆಲಿಕಾಪ್ಟರ್‌ ಮೂಲಕ ಕಾರ್ಕಳ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಕಾಬೆಟ್ಟುವಿನಲ್ಲಿರುವ ಅಂಬೇಡ್ಕರ್‌ ಭವನದ ಉದ್ಘಾಟನೆ, ತಾಲೂಕು ಕಚೇರಿ ಸಮೀಪದಲ್ಲಿರುವ ಕಿಸಾನ್‌ ಸಭಾ ಸಭಾಂಗಣದ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಕುಕ್ಕುಂದೂರು ನೆಲ್ಲಿಗುಡ್ಡೆಯಲ್ಲಿರುವ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ 35ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ವಿ. ಸುನಿಲ್ ಕುಮಾರ್‌, ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ, ವಿಧಾನ ಪರಿಷತ್‌ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್‌, ಎಸ್‌.ಡಿ.ಸಿ.ಸಿ. ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್.‌ ರಾಜೇಂದ್ರ ಕುಮಾರ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

600ಕ್ಕೂ ಅಧಿಕ ಪೊಲೀಸರ ನಿಯೋಜನೆ
ಸಿಎಂ ಆಗಮನ ಹಿನ್ನೆಲೆಯಲ್ಲಿ ಝಡ್‌ ಪ್ಲಸ್‌ ಶ್ರೇಣಿಯ ಭದ್ರತೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸುಮಾರು 600ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದ್ದು ಅವರು ಫೆ. 24ರಂದೇ ಕಾರ್ಕಳಕ್ಕೆ ಆಗಮಿಸಿ ರಿಹರ್ಸಲ್‌ ನಡೆಸಿರುತ್ತಾರೆ. ಉಡುಪಿ ಜಿಲ್ಲೆ ಮಾತ್ರವಲ್ಲದೇ ಹೊರ ಜಿಲ್ಲೆಯ ಪೊಲೀಸರನ್ನೂ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಐಜಿ, ಎಸ್‌ಪಿ ಹರಿರಾಂ ಶಂಕರ್‌ ಮಂಗಳವಾರ ಮಹಾತ್ಮ ಗಾಂಧಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅಡಿಷನಲ್‌ ಎಸ್‌ಪಿ, ಎಎಸ್‌ಪಿ, 15 ಮಂದಿ ಇನ್‌ಸ್ಪೆಕ್ಟರ್‌, 6 ಮಂದಿ ಡಿವೈಎಸ್‌ಪಿ, 34 ಮಂದಿ ಪಿಎಸ್‌ಐ ಭದ್ರತಾ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.





























































































error: Content is protected !!
Scroll to Top