ಕಾರ್ಕಳ : ಕರ್ನಾಟಕ ಜಾನಪದ ಅಕಾಡೆಮಿ ಕೊಡುಮಾಡುವ 2025ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ನಾಟಿ ವೈದ್ಯೆ ಮೆದಿಪು ಗುಲಾಬಿ ಗೌಡ್ತಿ ಅವರು ಭಾಜನರಾಗಿದ್ದಾರೆ. ಫೆ. 27ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. 89 ವರ್ಷದ ಗುಲಾಬಿ ಗೌಡ್ತಿ ಅವರು ಕಳೆದ 50 ವರ್ಷಗಳಿಂದ ನಾಟಿ ಔಷಧಿ ನೀಡುತ್ತಿದ್ದಾರೆ.






