ಕನ್ಯಾನ ಸದಾಶಿವ ಶೆಟ್ಟಿ – ಐಕಳ ಹರೀಶ್ ಶೆಟ್ಟಿ ಭಿನ್ನಾಭಿಪ್ರಾಯ ವಿಚಾರ ಸುಖಾಂತ್ಯ

ಮುಂಬಯಿ : ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹಾಗೂ ಉದ್ಯಮಿ, ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ನಡುವಿನ ಬಿನ್ನಾಭಿಪ್ರಾಯಗಳು ಸುಖಾಂತ್ಯ ಕಂಡಿದ್ದು, ಇದು ಸಮುದಾಯದ ಹಿತದೃಷ್ಟಿಯಿಂದ ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ.
ಫೆ. 26ರಂದು ಕಾಂದಿವಲಿ ಪೂರ್ವದ ಠಾಕೂರ್ ವಿಲೇಜ್‌ನಲ್ಲಿ ಸೋರಾ ಬೈ ನೈನ್ ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಮಾಜಿ ಸಂಸದ ಗೋಪಾಲ್ ಸಿ. ಶೆಟ್ಟಿ ಸಮಕ್ಷಮದಲ್ಲಿ ನಡೆದ ಸಂಧಾನ ಸಭೆಯಲ್ಲಿ ಐಕಳ ಹರೀಶ್ ಶೆಟ್ಟಿ ಹಾಗೂ ಕನ್ಯಾನ ಸದಾಶಿವ ಶೆಟ್ಟಿ ಅವರು ಸಮಾಜದ ಹಿತಾಸಕ್ತಿಯೇ ಸರ್ವೋಚ್ಚ ಎಂಬ ಉದಾತ್ತ ಉದ್ದೇಶದಿಂದ ತಮ್ಮ ವೈಮನಸ್ಸು ಮರೆತು, ಕೈಜೋಡಿಸಿ ಮುನ್ನಡೆಯುವ ದೃಢ ನಿರ್ಧಾರ ಕೈಗೊಂಡರು.
ಉದ್ಯಮಿಗಳಾದ ಮಹೇಶ್ ಶೆಟ್ಟಿ ತೆಳ್ಳಾರು, ಶಶಿಧರ್ ಶೆಟ್ಟಿ ಬರೋಡ, ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ಈ ಮಹತ್ವದ ಸಂಧಾನ ಪ್ರಕ್ರಿಯೆ ನಡೆದಿದ್ದು, ರಾಜೇಶ್‌ ಶೆಟ್ಟಿ, ಕೆ. ಕೆ. ಶೆಟ್ಟಿ ಅಹ್ಮದ್‌ನಗರ, ಗಿರೀಶ್ ಶೆಟ್ಟಿ ತೆಳ್ಳಾರ್, ಶಶಿಧರ ಶೆಟ್ಟಿ ಇನ್ನಂಜೆ, ಉಳ್ಳೂರು ಮೋಹನದಾಸ ಶೆಟ್ಟಿ, ಅಶೋಕ್ ಶೆಟ್ಟಿ ಬೆಳ್ಳಾಡಿ, ಅರವಿಂದ್ ಆನಂದ್ ಶೆಟ್ಟಿ, ಅಶೋಕ್ ಶೆಟ್ಟಿ ಪೆರ್ಮುದೆ ಉಪಸ್ಥಿತರಿದ್ದರು.
ಇದೇ ವೇಳೆ ಶಶಿಧರ ಶೆಟ್ಟಿ ಬರೋಡ ಅವರು ಫೋನ್ ಮೂಲಕ ಐಕಳ ಹಾಗೂ ಅಶೋಕ್ ಪಕ್ಕಳರ ನಡುವೆ ರಾಜಿ ಮಾತುಕತೆಯನ್ನು ನಡೆಸಿ ಅವರಿಬ್ಬರ ನಡುವೆ ನಡೆದ ಪ್ರಕರಣವನ್ನು ಕೂಡ ಸುಖಾಂತ್ಯಗೊಳಿಸಿದರು.

ಸದಾಶಿವ ಶೆಟ್ಟಿ ಅವರು ಒಕ್ಕೂಟದ ಮಹಾದಾನಿ, ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ಸಹಾಯ ಮಾಡುವ ಉದ್ದೇಶದಿಂದ ಸದಾಶಿವ ಶೆಟ್ಟಿ ಅವರು ನಮಗೆ ಶಕ್ತಿಯಾಗಿ ಸಹಕಾರ ನೀಡುತ್ತಾ ಬಂದಿದ್ದಾರೆ. ಸಮಾಜಕ್ಕೆ ಇಷ್ಟು ಪ್ರೀತಿ ಕೊಟ್ಟ ವ್ಯಕ್ತಿಯ ಮನಸ್ಸಿಗೆ ನೋವಾಗಿದೆ ಎಂದು ತಿಳಿದು ಬೇಸರಗೊಂಡಿದ್ದೇನೆ. ಅವರಲ್ಲಿ ಕ್ಷಮೆ ಯಾಚಿಸಿದ್ದೇನೆ, ನಮ್ಮೆಲ್ಲ ಬಿನ್ನಾಭಿಪ್ರಾಯಗಳನ್ನು ಮರೆತು ಈಗ ಒಟ್ಟಾಗಿದ್ದೇವೆ.
-ಐಕಳ ಹರೀಶ್‌ ಶೆಟ್ಟಿ

ನಾವೆಲ್ಲರೂ ಸಮಾಜಕ್ಕಾಗಿ ದುಡಿಯುತ್ತಿದ್ದೇವೆ. ಯಾವುದೇ ಭಿನ್ನಾಭಿಪ್ರಾಯ ಇದ್ದರೂ ಸಮಾಜದ ಏಳಿಗೆಗೋಸ್ಕರ, ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಾರದರ್ಶಕವಾಗಿ ಸಮಾಜವನ್ನು ಮುನ್ನಡೆಸೋಣ. ಹಲವಾರು ವರ್ಷಗಳಿಂದ ನಾನು ಮತ್ತು ಐಕಳ ಹರೀಶ್ ಶೆಟ್ಟಿ ಅವರು ಒಂದಾಗಿ ಕೆಲಸ ಮಾಡಿದ್ದೇವೆ. ಅವರು ಸಂಘಟನಾ ಚತುರರಾಗಿ ಕೆಲಸ ಮಾಡಿದರೆ, ನಾನು ನನ್ನಿಂದಾಗುವ ಸಹಕಾರ ನೀಡಿದ್ದೇನೆ.
– ಕನ್ಯಾನ ಸದಾಶಿವ ಶೆಟ್ಟಿ

































































































error: Content is protected !!
Scroll to Top