ಹಿಂದೂ ಸಂಗಮ ಕಾರ್ಯಕ್ರಮ ಪ್ರಚಾರ ವೇಳೆ ಹಲ್ಲೆ ಪ್ರಕರಣ – ಆರೋಪಿಗಳ ಬಂಧನ

ಮಡಿಕೇರಿ : ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಇಂದು ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ ಮೇಲೆ ಮುಸ್ಲಿಂ ಯುವಕರ ಮಾರಣಾಂತಿಕ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಘಟನೆ ಸಂಬಂಧ ಹಲ್ಲೆ ನಡೆಸಿದ ಎಲ್ಲಾ ನಾಲ್ವರು ಆರೋಪಿಗಳನ್ನ ಬಂಧಿಸಿರುವುದಾಗಿ ಕೊಡಗು ಎಸ್ಪಿ ಬಿಂದು ಮಣಿ ಮಾಹಿತಿ ನೀಡಿದ್ದಾರೆ. ಸಿದ್ದಿಕ್, ಸುಹೆಲ್, ನಾಭಿ, ರಶೀದ್ ಬಂಧಿತರು.

ಘಟನೆ
ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಹಿಂದೂ ಸಂಗಮ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯುತ್ತಿವೆ. ಮಡಿಕೇರಿ ತಾಲೂಕಿನ ಬಲ್ಲಮಾವಟಿ ಗ್ರಾಮದಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮಕ್ಕೆ ನಾಪೋಕ್ಲು ಪಟ್ಟಣದಲ್ಲಿ ಹಿಂದೂ ಯುವಕರು ಪಿಕಪ್ ವಾಹನದಲ್ಲಿ ಸೌಂಡ್ ಬಾಕ್ಸ್ ಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕೆಲ ಮುಸ್ಲಿಂ ಯುವಕರು ಈ ಭಾಗದಲ್ಯಾಕೆ ಪ್ರಚಾರ ಮಾಡುತಿದ್ದೀರಾ ಎಂದು ಪ್ರಶ್ನೆ ಮಾಡಿ ಜಗಳ ಶುರು ಮಾಡಿದ್ದಾರೆ. ಹಿಂದೂ ಯುವಕರು-ಮುಸ್ಲಿಂ ಯುವಕರಿಗೆ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಕೊನೆಗೆ ಗೌತಮ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗೌತಮ್‌ನನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಈ ಹಲ್ಲೆ ಪ್ರಕರಣದಲ್ಲಿ ನಾಪೋಕ್ಲು ಭಾಗದ ಪ್ರಭಾವಿ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಕೆರಳಿದ ಹಿಂದೂ ಕಾರ್ಯಕರ್ತರು ಮತ್ತು ಮುಖಂಡರು ನಾಪೋಕ್ಲು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಹಲ್ಲೆ ಮಾಡಿದ ಕಿಡಿಗೇಡಿಗಳನ್ನ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ, ನಾಪೋಕ್ಲು ಪೊಲೀಸ್ ಠಾಣೆಯ ಮುಂಭಾಗ ಸಾವಿರಾರು ಕಾರ್ಯಕರ್ತರು ಜಮಾಯಿಸಿ ಧರಣಿ ನಡೆಸಿದ್ದರು.
ಈ ಬೆನ್ನಲ್ಲೇ ಹಲ್ಲೆ ನಡೆಸಿದ ಆರೋಪಿಗಳಾದ ರಶೀದ್ ಸಿದ್ದಿಕ್, ಸುಹೇಲ್ ರಾಫಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದರು. ಇಂದು ಸಂಜೆಯೊಳಗೆ ಬಂಧನ ಮಾಡಬೇಕು ಎಂದು ಹಿಂದೂ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಇದೀಗ ಎಲ್ಲಾ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.



































































































error: Content is protected !!
Scroll to Top