ಕಾರ್ಕಳ : ಕುಂದಾಪುರ ಕಂಡ್ಲೂರು ಪೊಲೀಸ್ ಠಾಣೆಯ ಎಸ್ಐ ನಾಸೀರ್ ಹುಸೇನ್ (58) ಮಾ.1 ರಂದು ಹೃದಯಾಘಾತದಿಂದ ನಿಧನ ಹೊಂದಿದರು.
ಅವರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ನಡೆಯುತ್ತಿದ್ದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ವೇಳೆ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನವರಾದ ನಾಸಿರ್ ಹುಸೇನ್ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಸೇರಿದಂತೆ ವಿಧ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಕಂಡ್ಲೂರಿನ ಗ್ರಾಮಾಂತರ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪನಿರೀಕ್ಷಕರಾಗಿ ಕರ್ತವ್ಯದಲ್ಲಿದ್ದರು.

ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.





















