ಆಟೋ ಚಾಲಕ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಸದಾನಂದ ಸಾಲಿಯಾನ್‌ ಆಯ್ಕೆ

ಕಾರ್ಕಳ : ಕಾರ್ಕಳ ತಾಲೂಕು ಆಟೋ ಚಾಲಕ – ಮಾಲಕರ ಸಂಘದ ಅಧ್ಯಕ್ಷರಾಗಿ ನ್ಯಾಯವಾದಿ, ಬೈಲೂರು ಸದಾನಂದ ಸಾಲಿಯಾನ್‌ ಅವರು ಆಯ್ಕೆಯಾಗಿದ್ದಾರೆ.
ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ಸದಾನಂದ ಸಾಲಿಯಾನ್‌ ಅವರು ಕಾರ್ಕಳ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಬೈಲೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಕಾರ್ಯದರ್ಶಿಯಾಗಿ, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು ಕರಕರಿ ಫ್ರೆಂಡ್ಸ್‌ ನಲ್ಲೂ ತೊಡಗಿಸಿಕೊಂಡಿರುತ್ತಾರೆ.

ಬೈಲೂರಿನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿರುವ ಸದಾನಂದ ಅವರು, ವೈಕುಂಠ ಬಾಳಿಗ ಲಾ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದು 2005ರಲ್ಲಿ ಕಾರ್ಕಳದಲ್ಲಿ ವಕೀಲ ವೃತ್ತಿ ಪ್ರಾರಂಭಿಸಿರುತ್ತಾರೆ.









































































































error: Content is protected !!
Scroll to Top