ವೀಣಾ ಎಸ್. ಶೆಟ್ಟಿ ಅವರಿಗೆ ವೀರವನಿತೆ-2026 ಪ್ರಶಸ್ತಿ

ಉಡುಪಿ : ಬೆಂಗಳೂರಿನ‌ ಚಿತ್ರಸಂತೆ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ “ವೀರವನಿತೆ 2026” ವರ್ಷದ ಮಹಿಳಾ ಪ್ರಶಸ್ತಿಗೆ ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿ ಆಯ್ಕೆಯಾಗಿದ್ದಾರೆ. ಮಾ. 6ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರನಟಿ ತಾರ ಅನುರಾಧ ಪ್ರಶಸ್ತಿ ಪ್ರದಾನ ಮಾಡಿದರು. ವೀಣಾ ಶೆಟ್ಟಿ ಅವರು ಸುಮಾರು ಮೂವತ್ತು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹೀಗೆ ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸಮಾರಂಭದಲ್ಲಿ ಚಿತ್ರಸಂತೆ ಸಂಸ್ಥೆಯ ಪ್ರಮುಖರಾದ ಅರುಣ್ ಕುಮಾರ್ ಹಾಗೂ‌ ಮತ್ತಿತರರು‌ ಉಪಸ್ಥಿತರಿದ್ದರು.



































































































error: Content is protected !!
Scroll to Top