ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪದವು ಒಕ್ಕೂಟ, ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಕಲಂಬಾಡಿ ಪದವು ಹಾಗೂ ಗ್ರಾಮೀಣ ರೋಟರಿ ಸಮುದಾಯದಳದ ಸಂಯುಕ್ತ ಆಶ್ರಯದಲ್ಲಿ ಉದ್ಯಾವರ ಕುತ್ಪಾಡಿಯ ಶ್ರೀ ಮಂಜುನಾಥ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸಹಕಾರ ಹಾಗೂ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಾ. 12 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ವೈದ್ಯಕೀಯ ಅಧೀಕ್ಷಕ ಜಯಪ್ರಕಾಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ ಚೇತನ್ ನಾಯಕ್, ಪದವು ಒಕ್ಕೂಟದ ಅಧ್ಯಕ್ಷ ಸುರೇಶ್ ಆಚಾರ್ಯ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಸಂಗೀತಾ ಬಿ.ಎನ್., ಶಾಲಾ ಮುಖ್ಯ ಶಿಕ್ಷಕ ನಾಗರಾಜ್ ಬಿ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಕುಲಾಲ್, ಕೆನರಾ ಬ್ಯಾಂಕ್ ಸಮಾಲೋಚಕ ಪ್ರದೀಪ್ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ಬ್ರಿಜೇಶ್ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ನಿರೂಪಿಸಿದರು. ಸುಮಾರು 240 ಜನ ಶಿಬಿರದಲ್ಲಿ ಪಾಲ್ಗೊಂಡರು.
ಪದವಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ























