ಕಾರ್ಕಳ : ಕುಸಿದು ಬಿದ್ದು ವ್ಯಕ್ತಿ ಸಾವನಪ್ಪಿದ ದುರ್ಘಟನೆ ಮಾ. 12ರಂದು ಮರ್ಣೆ ಗ್ರಾಮದಲ್ಲಿ ನಡೆದಿದೆ. ಕುರ್ಪಾಡಿ ರಸ್ತೆ ವಿಜಯ್ (55) ಮೃತ ವ್ಯಕ್ತಿ. ಇವರು ಬೆಳಿಗ್ಗೆ ಮರ್ಣೆ ಗ್ರಾಮದ ಗುಡ್ಡೆಯಂಗಡಿಯಲ್ಲಿರುವ ತಮ್ಮ ತೋಟದ ಕೆಲಸಕ್ಕೆ ಹೋಗಿದ್ದು ಸ್ವಲ್ಪ ಸಮಯದ ನಂತರ ಅವರ ಹೆಂಡತಿಯ ತಂದೆ ಬಾಲಕೃಷ್ಣ ಅವರು ತೋಟಕ್ಕೆ ಹೋಗಿ ನೋಡಿದಾಗ ವಿಜಯ ಅವರು ಗೊಬ್ಬರದ ರಾಶಿಯ ಮೇಲೆ ಬಿದ್ದಿದ್ದರು. ಅಸ್ವಸ್ಥರಾಗಿದ್ದ ಅವರನ್ನು ಅಜೆಕಾರು ಪ್ರಾಥಮಿಕ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಅವರು ಹೃದಯ ಸಂಬಂಧಿ ಕಾಯಿಲೆ ಅಥವಾ ಇನ್ಯಾವುದೋ ಕಾಯಿಲೆಯಿಂದ ಕುಸಿದು ಬಿದ್ದು ಮೃತಪಟ್ಟಿರಬಹುದು ಎಂದು ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಸಿದು ಬಿದ್ದು ವ್ಯಕ್ತಿ ಸಾವು






































