ಶ್ರೀ ರಾಮಪ್ಪ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ : ಶ್ರೀ ರಾಮಪ್ಪ ಎಜುಕೇಶನ್ ಟ್ರಸ್ಟ್ ಕಾರ್ಕಳ ಹಾಗೂ ವಿದ್ಯಾಭಾರತಿ ಸಂಯೋಜಿತ ಪುಲ್ಕೇರಿಯ ಶ್ರೀರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ನಡೆಯಲಿರುವ ಅಮೃತ ಮಹೋತ್ಸವ ಸಂಭ್ರಮ ಹಾಗೂ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಾ. 13ರಂದು ಆನೆಕೆರೆ ಶ್ರೀ ಕೃಷ್ಣ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು.

ಹಳೆ ವಿದ್ಯಾರ್ಥಿ ಹಾಗೂ ಉದ್ಯಮಿ ಕೆ. ಉಮೇಶ್ ರಾವ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭ ಶ್ರೀ ಕೃಷ್ಣ ಕ್ಷೇತ್ರದ ಪ್ರಧಾನ ಅರ್ಚಕ ಸದಾನಂದ ಶಾಂತಿ, ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಶ್ರೀಧರ್ ಎನ್. ಸುವರ್ಣ, ಕೋಶಾಧಿಕಾರಿ ಸಂತೋಷ್ ಹೆಗ್ಡೆ, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಚಂದ್ರಶೇಖರ ಹೆಗ್ಡೆ, ಸಮಿತಿ ಅಧ್ಯಕ್ಷ ಡಾ. ಜ್ಞಾನೇಶ್ ಕಾಮತ್, ಕಾರ್ಯದರ್ಶಿ ಹರೀಶ್ ಅಂಚನ್, ಅಮೃತ ಮಹೋತ್ಸವ ಕಾರ್ಯಕ್ರಮದ ಸಂಯೋಜಕ ಪ್ರಕಾಶ್ ರಾವ್, ನಿವೃತ್ತ ಅಧ್ಯಾಪಕ ಅಣ್ಣು ಮಾಸ್ಟ್ರು, ಅಧ್ಯಾಪಕ ಸುಧಾಕರ್ ಹಾಗೂ ಸಮಿತಿಯ ಸದಸ್ಯರಾದ ವಸಂತ್ ಎಂ., ಸಂತೋಷ್ ರಾವ್ ಮತ್ತು ತಾರನಾಥ ಕೋಟ್ಯಾನ್ ಉಪಸ್ಥಿತರಿದ್ದರು. ಅಮೃತ ಮಹೋತ್ಸವ ಸಮಿತಿ ಸಂಚಾಲಕ ಪ್ರಕಾಶ್ ರಾವ್ ಕಾರ್ಯಕ್ರಮ ನಿರ್ವಹಿಸಿದರು.































































































error: Content is protected !!
Scroll to Top