ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಕಾರ್ಕಳ ಬಿಜೆಪಿಯಿಂದ ಪ್ರತಿಭಟನೆ

ಕಾರ್ಕಳ : ಕಾಂಗ್ರೆಸ್ ಸರಕಾರಕ್ಕೆ ರಾಜ್ಯದಲ್ಲಿ ಆಡಳಿತಕ್ಕೆ ಬಂದು ಮೂರು ವರ್ಷವಾದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವಿಲ್ಲ. ಇನ್ನು ಸಿಎಂ ಮೂರು ವರ್ಷದಲ್ಲಿ ನಾಲ್ಕು ಬಜೆಟ್ ಮಂಡಿಸಿದರೂ ಕರಾವಳಿ ಭಾಗಕ್ಕೆ ನಯಾಪೈಸೆಯ ಅನುದಾನ ನೀಡಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಕಾರ್ಕಳದಲ್ಲಿ ನಡೆದ ಅಭಿವೃದ್ಧಿ ಚಟುವಟಿಕೆಗಳು ಜನತೆಗೆ ತಿಳಿದಿದೆ. ಆದರೆ ಈಗ ಕಾರ್ಕಳದಲ್ಲಿ ಅಭಿವೃದ್ಧಿಯ ಪರ್ವಕ್ಕೆ ಸರಕಾರ ಬ್ರೇಕ್ ಹಾಕಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಅವರು ಮಾ. 14ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಜನ ವಿರೋಧಿ ನೀತಿ ಖಂಡಿಸಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ವತಿಯಿಂದ ತಾಲೂಕು ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನೆಯಂಗವಾಗಿ ಬಜಗೋಳಿಯಲ್ಲಿ ಮುಡಾರು ಗ್ರಾಮ ಸಮಿತಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ತೀವ್ರವಾಗಿ ಟೀಕಿಸಿದರು.

ಕಟ್ಟಡ ಸಾಮಗ್ರಿಗಳ ಕೊರತೆ, ಮರಳು ಮತ್ತು ಕೆಂಪು ಕಲ್ಲು ಸಾಗಾಟಕ್ಕೆ ಸೂಕ್ತ ನೀತಿ ಇಲ್ಲದೆ ನಿರ್ಮಾಣ ವಲಯ ಸ್ಥಗಿತಗೊಂಡಿದ್ದು, ದುಡಿಯುವ ವರ್ಗಕ್ಕೆ ತೀವ್ರ ಹಿನ್ನಡೆಯಾಗಿದೆ. ದಾಖಲೆಗಳ ಸಮಸ್ಯೆಯಾದ ಇ-ಸ್ವತ್ತು, ಖಾತೆ ಹಾಗೂ 9/11 ಏಕವಿನ್ಯಾಸ ಅನುಮೋದನೆ ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದು, ಸಾಮಾನ್ಯ ಜನರು ಸಾಲ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಹೊಸ ಬಿಪಿಎಲ್ ಕಾರ್ಡ್ಗಳಿಗೆ ಅವಕಾಶ ನೀಡದಿರುವುದು ಮತ್ತು ಅಸ್ತಿತ್ವದಲ್ಲಿರುವ ಕಾರ್ಡ್ಗಳ ರದ್ದತಿ ಸೇರಿದಂತೆ ವಿಧವಾ ವೇತನ, ಸಂಧ್ಯಾ ಸುರಕ್ಷಾ ಪಿಂಚಣಿಗಳನ್ನು ಸ್ಥಗಿತಗೊಳಿಸಿರುವುದಕ್ಕೆ ಆಕ್ರೋಶ ವ್ಯಕ್ತಿಪಡಿಸಿದರು. ನಿರಂತರವಾಗಿ ಏರಿಕೆಯಾಗುತ್ತಿರುವ ವಿದ್ಯುತ್ ದರ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್‌ನಿAದ ಸಾರ್ವಜನಿಕರು ಮತ್ತು ಉದ್ದಿಮೆದಾರರು ತೊಂದರೆ ಅನುಭವಿಸುವಂತಾಗಿದೆ. ರಾಜ್ಯ ಬಜೆಟ್‌ನಲ್ಲಿ ಕರಾವಳಿ ಭಾಗದ ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ಅನುದಾನ ನೀಡದೆ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿದ ಅವರು ಕಳೆದ 2 ವರ್ಷ 9 ತಿಂಗಳ ಅವಧಿಯಲ್ಲಿ ಸರ್ಕಾರದಿಂದ ಯಾವುದೇ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ತಾಲೂಕಿನಾದ್ಯಂತ ಪ್ರತಿಭಟನೆ
ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪುರಸಭೆ ಸೇರಿದಂತೆ ತಾಲೂಕಿನ ಗ್ರಾಮ ಮಟ್ಟದ 35 ಕಡೆಗಳಲ್ಲಿ ಪ್ರತಿಭಟನೆ ನಡೆಯಿತು.

ನಂದಳಿಕೆ ಗ್ರಾಮ ಪಂಚಾಯತ್ ಹಾಗೂ ಬೋಳ ಗ್ರಾಮ ಪಂಚಾಯತ್ ಜಂಟಿಯಾಗಿ ಕೆದಿಂಜೆಯಲ್ಲಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ತಾರು ನವೀನ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದ ಬಳಿಕ ಸರ್ಕಾರದ ಆಡಳಿತ ವೈಫಲ್ಯಗಳಿಂದ ಜನಸಾಮಾನ್ಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದರು.

ನಾಟಕ ಕಂಪೆನಿ – ಮಹಾವೀರ ಹೆಗ್ಡೆ
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ ಹೆಗ್ಡೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರೇ ಅನುದಾನ‌ ಸಿಗುತ್ತಿಲ್ಲ ಎಂದು ತಮ್ಮ ಸರಕಾರದ ವಿರುದ್ಧ ವಿಷಾದ ವ್ಯಕ್ತಪಡಿಸಿದ್ದಾರೆ. ಇನ್ನು ಕಾರ್ಕಳದ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಕ್ರೆಡಿಟ್ ಪಡೆಯಲು ನಾಟಕವಾಡುತ್ತಿದ್ದಾರೆ. ಅಲ್ಲದೆ ಪರಶುರಾಮ ಥೀಮ್ ಪಾರ್ಕ್, ಎಣ್ಣೆಹೊಳೆ ಏತ ನೀರಾವರಿ, ಜವಳಿ ಪಾರ್ಕ್ ಹೀಗೆ ಅಭಿವೃದ್ಧಿ ಯೋಜನೆಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ. ಆದರೆ ಈ ಬಗ್ಗೆ ಸತ್ಯಾಸತ್ಯತೆ ತಿಳಿದ ಜನರು ಉದಯ್ ಶೆಟ್ಟಿಯವರ ನಾಟಕ ಕಂಪನಿಯ ಟೆಂಟನ್ನು ತಮ್ಮ ಗ್ರಾಮದಲ್ಲಿ ತೆರಯಲು ಬಿಡುವುದಿಲ್ಲ ಎಂದರು.

ಕಾಂಗ್ರೆಸ್ ಗೆ ಸಿದ್ಧಾಂತವಿಲ್ಲ – ನವೀನ್ ನಾಯಕ್
ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾತನಾಡಿ, ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಹಳ್ಳಿ ಹಳ್ಳಿಯಲ್ಲಿ ಅಭಿವೃದ್ಧಿ ಚಟುವಟಿಕೆಗಳು ನಡೆದಿದೆ. ಆದರೆ ಈಗ ರಸ್ತೆಯ ಗುಂಡಿ ಮಚ್ಚಲೂ ಹಣವಿಲ್ಲ. ಗ್ರಾಮ ಪಂಚಾಯತ್ ಮಟ್ಟದಿಂದ ವಿಧಾನಸೌಧದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತ ಯಂತ್ರ ಸಂಪೂರ್ಣವಾಗಿ ಹಳಿತಪ್ಪಿದೆ ಎಂದ ಅವರು ಕಾಂಗ್ರೆಸ್ ಸರಕಾರಕ್ಕೆ ಯಾವುದೇ ಸಿದ್ಧಾಂತವಿಲ್ಲ ಎಂದು ಹೇಳಿದರು.

ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಬಿಜೆಪಿಯ ಪ್ರಮುಖರಾದ ಸೂರ್ಯಕಾಂತ್ ಶೆಟ್ಟಿ, ಜಯರಾಮ್ ಸಾಲ್ಯಾನ್, ಸುಮಿತ್ ಶೆಟ್ಟಿ ಬೈಲೂರು, ಪ್ರಕಾಶ್ ರಾವ್, ಸುಮಾ ಕೇಶವ್, ಯೋಗೀಶ್ ನಾಯಕ್, ನಕ್ರೆ ಅಂಥೋನಿ ಡಿ ಸೋಜಾ, ರವೀಂದ್ರ ಕುಮಾರ್, ಸೇರಿದಂತೆ ತಾಲೂಕಿನ ಜನಪ್ರತಿನಿಧಿಗಳು, ಗ್ರಾ.ಪಂ ಸದಸ್ಯರು, ಪಕ್ಷದ ಹಿರಿಯರು, ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಕಣಂಜಾರು, ಬೈಲೂರು, ಕೌಡೂರು ಗ್ರಾಮಗಳ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಬೈಲೂರು ಪೇಟೆಯಲ್ಲಿ ಪ್ರತಿಭಟನೆ ನಡೆಯಿತು.
ಕಡ್ತಲ
ಶಿವಪುರ ಗ್ರಾಮ ಸಮಿತಿ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ




























































































error: Content is protected !!
Scroll to Top