ಇರಾನ್ ಡ್ರೋನ್‌ ದಾಳಿ – ದುಬೈ ಏರ್‌ಪೋರ್ಟ್‌ನಲ್ಲಿ ವಿಮಾನಗಳ ಹಾರಾಟ ಸ್ಥಗಿತ

ದುಬೈ : ಇರಾನ್ ಡ್ರೋನ್ ದಾಳಿಗೆ ದುಬೈ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.

ಸೋಮವಾರ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ಇಂಧನ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿತು. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ. ಬೆಂಕಿಯನ್ನು ನಂದಿಸಲು ದುಬೈ ನಾಗರಿಕ ರಕ್ಷಣಾ ಸಿಬ್ಬಂದಿಯನ್ನು ತಕ್ಷಣವೇ ನಿಯೋಜಿಸಲಾಗಿದೆ. ಸುತ್ತಮುತ್ತ ಸುರಕ್ಷತಾ ಕ್ರಮಗಳನ್ನು ಸಕ್ರಿಯಗೊಳಿಸಿರುವುದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.































error: Content is protected !!
Scroll to Top