ಕಟಪಾಡಿಯಲ್ಲಿ ಗ್ಯಾಸ್ ಟ್ಯಾಂಕರ್‌ ಪಲ್ಟಿ

ಉಡುಪಿ : ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಾ.16ರಂದು ಬೆಳಗ್ಗೆ ಕಟಪಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಅಗ್ನಿಶಾಮಕ ದಳದವರು ನಿರಂತರ ನೀರು ಹಾಯಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿರಿಸಿದ್ದಾರೆ. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು.

ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿತ್ತು. ಕಟಪಾಡಿ ಜಂಕ್ಷನ್‌ನಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿಗಾಗಿ ರಸ್ತೆಯನ್ನು ಡೈವರ್ಶನ್ ಮಾಡಲಾಗಿತ್ತು. ಈ ತಿರುವಿನಲ್ಲಿ ವೇಗದಿಂದ ಬಂದ ಟ್ಯಾಂಕರ್‌ ಅನ್ನು ಚಾಲಕ ಒಮ್ಮೆಲೆ ತಿರುಗಿಸಿದ ಪರಿಣಾಮ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.









































































































error: Content is protected !!
Scroll to Top