ಸೇತುವೆಗಳ ನಿರ್ಮಾಣಕ್ಕೆ 4.50 ಕೋ. ರೂ. ಅನುದಾನ ಮಂಜೂರು – ಸುನಿಲ್‌ ಕುಮಾರ್

ಕಾರ್ಕಳ : ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾ ಮುಖ್ಯರಸ್ತೆಗಳಲ್ಲಿ ಹಾದು ಹೋಗುವ 3 ಸೇತುವೆಗಳ ಮರು ನಿರ್ಮಾಣ ಕಾಮಗಾರಿಗೆ ತಲಾ 1.50 ಕೋಟಿಯಂತೆ ಒಟ್ಟು 4.50 ಕೋ. ರೂ. ಅನುದಾನ ಮಂಜೂರಾಗಿ ಸರಕಾರದ ಆಡಳಿತಾತ್ಮಕ ಅನುಮೋದನೆ ಆಗಿರುತ್ತದೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಕಾರ್ಕಳದ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಪ್ರಮುಖ ಸೇತುವೆಗಳ ಮರು ನಿರ್ಮಾಣದ ಪೈಕಿ ಕುಕ್ಕುಂದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾರ್ಕಳ ನಕ್ರೆ ರಂಗನಪಲ್ಕೆ ಜಿಲ್ಲಾ ಮುಖ್ಯರಸ್ತೆಯ ಪರಪು ಎಂಬಲ್ಲಿನ ಸೇತುವೆ, ರೆಂಜಾಳ ನೆಲ್ಲಿಕಾರು ಜಿಲ್ಲಾ ಮುಖ್ಯರಸ್ತೆಯ ರೆಂಜಾಳ ಗ್ರಾಮ ಪಂಚಾಯತ್‌ ಬಳಿಯ ಸೇತುವೆ ಹಾಗೂ ಬೋಳ ಗ್ರಾಮದ ಶ್ರೀ ಮೃತ್ಯುಂಜಯ ಸ್ವಾಮಿ ದೇವಸ್ಥಾನದ ಸಮೀಪದ ಸೇತುವೆ ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿರುತ್ತದೆ.

ಸಾರ್ವಜನಿಕರ ಹಾಗೂ ವಾಹನಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸೇತುವೆಗಳ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಹಾಗೂ ಇಲಾಖಾ ಸಚಿವರಿಗೆ ಪತ್ರ ಮುಖೇನ ಮನವಿ ಮಾಡಲಾಗಿತ್ತು. ಇದರ ಪರಿಣಾಮವಾಗಿ ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 4.50 ಕೋಟಿ ರೂ. ಅನುದಾನ ಮಂಜೂರಾಗಿ ಸೇತುವೆಗಳ ಮರು ನಿರ್ಮಾಣ ಕಾರ್ಯಕ್ಕೆ ಸರಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು ಆದಷ್ಟು ಶೀಘ್ರವಾಗಿ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಶಾಸಕರ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ.



































































































error: Content is protected !!
Scroll to Top