ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ ಬೆಳ್ಳಿ ಹಬ್ಬದ ಸಂಭ್ರಮ – ಬೃಹತ್ ರಕ್ತದಾನ ಶಿಬಿರ – 119 ಯುನಿಟ್ ರಕ್ತ ಸಂಗ್ರಹ

ಕಾರ್ಕಳ : ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಂಭ್ರಮದ ಪ್ರಯುಕ್ತ ಫ್ರೆಂಡ್ಸ್ ಪವ‌ರ್ ಜಿಮ್ , ಲೇಡಿಸ್ ಫಿಟ್‌ನೆಸ್ ಹೌಸ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಡುರಸ್ತೆ ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇವರ ಆಶ್ರಯದಲ್ಲಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಹಯೋಗದೊಂದಿಗೆ ಮಾ. 15ರಂದು ಶ್ರೀ ದುರ್ಗಾಪರಮೇಶ್ವರಿ ಸಹಕಾರಿ ಸಂಘದ ಸಭಾಂಗಣದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ವೈದ್ಯ ಡಾ. ಕೆ. ಆರ್. ಜೋಶಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ರಕ್ತಾದಾನ ಶಿಬಿರದ ಮಹತ್ವತೆಯ ಬಗ್ಗೆ ತಿಳಿಸಿದರು. ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯ ಡಾ. ಒಜಸ್ವಿ ಸಂದರ್ಭೋಚಿತವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಪ್ರವೀಣ್ ಕುಮಾರ್ ಶೆಟ್ಟಿ ಕುಕ್ಕುಂದೂರು, ಅಥ್ಲೆಟಿಕ್ ಕ್ರೀಡಾಪಟು ರಾಜೇಶ್ ಶೆಟ್ಟಿ ಬಸ್ರಿ ಅವರನ್ನು ಸನ್ಮಾನಿಸಲಾಯಿತು. ಫ್ರೆಂಡ್ಸ್ ಪವರ್ ಜಿಮ್ ಮತ್ತು ಲೇಡಿಸ್ ಫಿಟ್‌ನೆಸ್ ಹೌಸ್ ಜೋಡುರಸ್ತೆ ಇದರ ಆಡಳಿತ ಪಾಲುದಾರರಾದ ಯೋಗೀಶ್ ಸಾಲ್ಯಾನ್ ಮತ್ತು ಮೊಹಮ್ಮದ್ ಆಲಿ ಅವರನ್ನು ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸಂತೋಷ್ ರಾವ್ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷ ವೃಷಭರಾಜ ಕಡಂಬ, ನಿರ್ದೇಶಕರು, ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ದಿನೇಶ್ ಕುಮಾ‌ರ್ ವೈ ವಂದಿಸಿದರು. ಶಿಬಿರದಲ್ಲಿ 119 ಯುನಿಟ್‌ಗಳಷ್ಟು ರಕ್ತ ಸಂಗ್ರಹವಾಯಿತು.

































































































error: Content is protected !!
Scroll to Top