ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕಾರ್ಯಾರಂಭ

ಮರ್ಣೆ ಪಂಚಾಯತ್‌ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ (ರಿ.) ಇದರ ಐದನೇ ಅಂಗಸಂಸ್ಥೆ ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪದ್ಮನಗರದಲ್ಲಿ ಕಾರ್ಯಾರಂಭಗೊಳ್ಳಲಿದೆ. 2026-27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭಗೊಳ್ಳುತ್ತಿದ್ದು, ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರದಿಂದ ಅನುಮೋದನೆ ಪಡೆದಿರುತ್ತದೆ.
ಅಜೆಕಾರಿನ ಪದ್ಮನಗರದಲ್ಲಿ ಟ್ರಸ್ಟ್‌ನ 4ನೇ ಕ್ಯಾಂಪಸ್ ನಿರ್ಮಾಣಗೊಂಡಿದ್ದು, ಟ್ರಸ್ಟಿನ ಸಮಾಜಸೇವಾ ಮತ್ತು ಶೈಕ್ಷಣಿಕ ಕಾಳಜಿಯ ಭಾಗವಾಗಿ ಅಜೆಕಾರಿನ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದ ಉಚಿತ ಶಿಕ್ಷಣ ನೀಡುವುದಾಗಿ ಆಡಳಿತ ಸಮಿತಿ ನಿರ್ಧರಿಸಿದೆ. ಟ್ರಸ್ಟ್ ಕಳೆದ 15 ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣ ನೀಡುವುದರೊಂದಿಗೆ ಅನೇಕ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಿದ್ಯಾರ್ಥಿ ವೇತನಗಳನ್ನು ನೀಡುತ್ತಾ ಬಂದಿದೆ. ಇದರ ಮುಂದುವರಿದ ಭಾಗವಾಗಿ ಪ್ರಸ್ತುತ ಎಂಟನೇ ತರಗತಿ ಪೂರ್ಣಗೊಳಿಸಿ 9ನೇ ತರಗತಿಗೆ ಅಜೆಕಾರ್ ಜ್ಞಾನಸುಧಾ ಸಂಸ್ಥೆಯಲ್ಲಿ ದಾಖಲಾತಿ ಬಯಸುವ ವಿದ್ಯಾರ್ಥಿಗಳು ಎಂಟನೇ ತರಗತಿಯ ಅಂಕಪಟ್ಟಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಪೋಷಕರೊಂದಿಗೆ ಶಾಲಾ ಕಚೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಎ. 30ರೊಳಗೆ ಶಾಲಾ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ. ಸಂಪರ್ಕ ಸಂಖ್ಯೆ : 7992920707.































































































error: Content is protected !!
Scroll to Top