ಎ. 14 : ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಲೋಕಾರ್ಪಣೆ

ಡಾ. ಎಂ. ವೀರಪ್ಪ ಮೊಯ್ಲಿ ಉದ್ಘಾಟನೆ – ಶಾಸಕ ಸುನಿಲ್‌ ಕುಮಾರ್‌ ಅಧ್ಯಕ್ಷತೆ

ಅಜೆಕಾರ್‌ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ – ಟ್ರಸ್ಟ್‌ ಘೋಷಣೆ

ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಅಜೆಕಾರು ಪದ್ಮನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಎ. 14ರಂದು ಉದ್ಘಾಟನೆಗೊಳ್ಳಲಿದೆ.
ಕಳೆದ 15 ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣ ನೀಡುವುದರೊಂದಿಗೆ ಅನೇಕ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಿದ್ಯಾರ್ಥಿ ವೇತನಗಳನ್ನು ನೀಡುತ್ತಾ ಬಂದಿರುವ ಟ್ರಸ್ಟ್‌ ವತಿಯಿಂದ ಅಜೆಕಾರು ಪದ್ಮನಗರದಲ್ಲಿ 4ನೇ ಕ್ಯಾಂಪಸ್ ನಿರ್ಮಾಣಗೊಳ್ಳುತ್ತಿದೆ.

ಶಾಲಾ ಕಚೇರಿ ಸಂಪರ್ಕಿಸಿ
ಪ್ರಸ್ತುತ ಎಂಟನೇ ತರಗತಿ ಪೂರ್ಣಗೊಳಿಸಿ 9ನೇ ತರಗತಿಗೆ ಅಜೆಕಾರ್ ಜ್ಞಾನಸುಧಾ ಸಂಸ್ಥೆಯಲ್ಲಿ ದಾಖಲಾತಿ ಬಯಸುವ ವಿದ್ಯಾರ್ಥಿಗಳು ಎಂಟನೇ ತರಗತಿಯ ಅಂಕಪಟ್ಟಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಪೋಷಕರೊಂದಿಗೆ ಎ.30ರೊಳಗೆ ಶಾಲಾ ಕಚೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಸಂಪರ್ಕ ಸಂಖ್ಯೆ : 7992920707.































































































error: Content is protected !!
Scroll to Top