ಉಡುಪಿ : ಬೈಕ್ ಮತ್ತು ಟೆಂಪೋ ಮಧ್ಯೆ ಡಿಕ್ಕಿಯಾಗಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಮಣಿಪಾಲ ಆತ್ರಾಡಿಯ ಕಬ್ಯಾಡಿ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಹೆರ್ಗ ಗ್ರಾಮದ ಭಾಸ್ಕರ ನಾಯಕ್(70) ಎಂದು ಗುರುತಿಸಲಾಗಿದೆ. ಆತ್ರಾಡಿಯಿಂದ ಮೂಡುಬೆಳ್ಳೆ ಕಡೆಗೆ ಹೋಗುತ್ತಿದ್ದ 407 ಟೆಂಪೋ ಎದುರಿನಲ್ಲಿ ಬರುತ್ತಿದ್ದ ಬೈಕ್ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕಿನಲ್ಲಿದ್ದ ಇಬ್ಬರು ಸವಾರರು ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಭಾಸ್ಕರ ನಾಯಕ್ ಸ್ಥಳದಲ್ಲೇ ಮೃತಪಟ್ಡಿದ್ದಾರೆ. ಬೈಕಿನ ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
















































