ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಎದುರು ಧರಣಿ ಕುಳಿತ ರಘುಪತಿ ಭಟ್‌

ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಆದೇಶ ನೀಡದೇ ಸತಾಯಿಸುತ್ತಿದೆ ಎಂದು ಮಾಜಿ ಶಾಸಕ ರಘುಪತಿ ಭಟ್ ಅವರು ಪ್ರಾಧಿಕಾರದ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಬಡಾನಿಡಿಯೂರು ಗ್ರಾಮದ 90 ಸೆಂಟ್ಸ್ ಜಾಗದಲ್ಲಿ ರೆಸಾರ್ಟ್ ನಿರ್ಮಿಸುವ ಉದ್ದೇಶದಿಂದ ಜಾಗಕ್ಕೆ ಏಕ ವಿನ್ಯಾಸ ನಕ್ಷೆ ನೀಡುವಂತೆ ರಘುಪತಿ ಭಟ್ 2024ರ ಮಾ. 20ರಂದು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದು ಅದಕ್ಕೆ ಈವರೆಗೆ ಅನುಮೋದನೆ ನೀಡದೇ ಪ್ರಾಧಿಕಾರ ಸತಾಯಿಸುತ್ತಿದೆ ಎಂದು ಆರೋಪಿಸಿ ಬೆಳಗ್ಗೆ 9:30ರಿಂದ ಧರಣಿ ಆರಂಭಿಸಿದ್ದಾರೆ.

ಏಕ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಬೇಕು ಇಲ್ಲವೇ ನೀಡಲು ಆಗುವುದಿಲ್ಲ ಎಂಬುದಾಗಿ ಹಿಂಬರಹ ನೀಡಬೇಕು. ಅಲ್ಲಿಯವರೆಗೆ ಧರಣಿ ಮುಂದುವರಿಸಲಾಗುವುದು. ಹಿಂಬರಹ ನೀಡಿದರೆ ಅದರಂತೆ ಮುಂದೆ ಕಾನೂನು ಹೋರಾಟ ನಡೆಸಲಾಗುವುದು ಎಂದು ರಘುಪತಿ ಭಟ್ ಹೇಳಿದರು. ರಘುಪತಿ ಭಟ್ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿ ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಾಧಿಕಾರದ ಆಯುಕ್ತ ಮಹೇಶ್ ಜೆ., ರಘುಪತಿ ಭಟ್ ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಕಾನೂನು ತೊಡಕು ಇಲ್ಲ. ಕರಾವಳಿ ಯುವಕ ಮಂಡಲ ಹೈಕೋರ್ಟ್ ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಬಗ್ಗೆ ಕಾನೂನು ಸಲಹೆ ಪಡೆದುಕೊಂಡು ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು.





























































































error: Content is protected !!
Scroll to Top