ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ – ಆರೋಪಿಗಳ ಬಂಧನ

ಕಾರ್ಕಳ : ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ ಘಟನೆ ಮಾ. 27ರಂದು ನಡೆದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಪ್ರಸನ್ನ ಎಂ. ಎಸ್. ಮತ್ತು ಸಿಬ್ಬಂದಿ ಕಸಬಾ ಗ್ರಾಮದ ಹಂಚಿಕಟ್ಟೆ ಹೋಂಡಾ ಶೋರೂಮ್ ಬಳಿ ಬಂಗ್ಲೆಗುಡ್ಡೆ ವೃತ್ತದಿಂದ ಬರುತ್ತಿದ್ದ KA-15 Z-0007ನೇ ನಂಬ್ರದ ಕಪ್ಪು ಬಣ್ಣದ ಫಾರ್ಚುನರ್ ಕಾರನ್ನು ನಿಲ್ಲಿಸುವಂತೆ ಸೂಚನೆ ನೀಡಿದಾಗ, ಕಾರಿನಲ್ಲಿದ್ದ ಆಪಾದಿತರಾದ ಕುಂದಾಪುರ ಮೂಲದ ಸುದರ್ಶನ್, ಕರ್ತವ್ಯ ಶೆಟ್ಟಿ, ಅರುಣ್, ಶ್ರೀಕಾಂತ್ ಮತ್ತು ಶಶಿಕಾಂತ್ ಪೊಲೀಸರನ್ನು ಕೊಲ್ಲುವ ಉದ್ದೇಶದಿಂದ ಅವರ ಮೇಲೆ ಕಾರನ್ನು ಹತ್ತಿಸಲು ಪ್ರಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರು ಆರೋಪಿಗಳನ್ನೂ ವಶಕ್ಕೆ ಪಡೆದಿದ್ದಾರೆ.



































































































error: Content is protected !!
Scroll to Top