ಉಡುಪಿಗೆ ಹೋಗಿ ಬರುತ್ತೇನೆಂದು ಹೋದ ವ್ಯಕ್ತಿ ನಾಪತ್ತೆ

ಹೆಬ್ರಿ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸಮನವಳ್ಳಿ ಗ್ರಾಮ ಹನುಮಂತಪ್ಪ (50) ಮತ್ತವರ ಮಗ ದರ್ಶನ್‌ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್‌ಮಿಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲಿಯೇ ವಾಸ್ತವ್ಯವಿದ್ದರು. ಮಾ. 25ರಂದು ಸಂಜೆ 7 ಗಂಟೆಗೆ ಉಡುಪಿಗೆ ಹೋಗಿ ಬರುತ್ತೇನೆಂದು ಹೋಗಿದ್ದು, ಮಾ. 26ರಂದು ಅವರ ಮೊಬೈಲ್‌ಗೆ ಕರೆ ಮಾಡಿದಾಗ ಉಡುಪಿಯಲ್ಲಿ ಇರುವುದಾಗಿ ತಿಳಿಸಿದ್ದರು. ಆದರೆ, ನಂತರ ಪೋನ್ ಸ್ವೀಚ್ ಆಫ್ ಆಗಿದ್ದು, ಊರಿನಲ್ಲಿ ಮತ್ತು ಉಡುಪಿಯಲ್ಲಿರುವ ಸಂಬಂಧಿಕರಲ್ಲಿ ವಿಚಾರಿಸಿದಾಗ ಅವರ ಮಾಹಿತಿ ದೊರೆಯದೇ ಇದ್ದು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಗ ದರ್ಶನ್‌ ನೀಡಿದ ದೂರಿನಂತೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.





























































































error: Content is protected !!
Scroll to Top