ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎ. 5ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದರೂ ಗಾಳಿಯ ತೀವ್ರತೆ ಹೆಚ್ಚಿದ್ದರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.



























