ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿರುವ ಸಂತ್ರಸ್ತೆ, ಸ್ವಾಮೀಜಿಯವರು ತಮ್ಮ ವಿಶ್ವಾಸವನ್ನು ದುರುಪಯೋಗಪಡಿಸಿಕೊಂಡು ದೈಹಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದ್ದಾರೆ.
​ದೂರಿನ ಸಾರಾಂಶದಂತೆ, ಲಿಂಗಾಯತ ಸಮುದಾಯಕ್ಕೆ ಸೇರಿದ ಸಂತ್ರಸ್ತ ಮಹಿಳೆ ಸ್ವಾಮೀಜಿಯವರ ಭಕ್ತೆಯಾಗಿದ್ದು, ಹಲವು ಹೋರಾಟಗಳಲ್ಲಿ ಅವರಿಗೆ ಬೆಂಬಲ ನೀಡಿದ್ದರು. ಈ ಪರಿಚಯದ ಹಿನ್ನೆಲೆಯಲ್ಲಿ ಮಠಕ್ಕೆ ಕರೆಸಿಕೊಂಡ ಸ್ವಾಮೀಜಿ, ‘ಪ್ರಸಾದ ನೀಡುತ್ತೇನೆ’ ಎಂದು ಹೇಳಿ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಸಂದರ್ಭದಲ್ಲಿ ತಮಗೆ ಅರಿವಿಲ್ಲದಂತೆ ಖಾಸಗಿ ವಿಡಿಯೋ ಚಿತ್ರೀಕರಿಸಿಕೊಳ್ಳಲಾಗಿದ್ದು, ಅದನ್ನು ಇಟ್ಟುಕೊಂಡು ಈಗ ಬೆದರಿಕೆ ಹಾಕಲಾಗುತ್ತಿದೆ ಎಂದು ಮಹಿಳೆ ಆರೋಪಿಸಿದ್ದಾರೆ.
​ಪ್ರತಿ ರಾತ್ರಿ ತಮಗೆ ದೂರವಾಣಿ ಕರೆ ಮಾಡುವ ಸ್ವಾಮೀಜಿ, ‘ಬೆತ್ತಲೆ ವಿಡಿಯೋ ಕಾಲ್ ಮಾಡು, ಇಲ್ಲದಿದ್ದರೆ ನಿನ್ನ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತೇನೆ’ ಎಂದು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಈ ಕಿರುಕುಳದಿಂದಾಗಿ ತಾನು ತೀವ್ರ ಮಾನಸಿಕ ಒತ್ತಡ ಹಾಗೂ ಅವಮಾನಕ್ಕೆ ಒಳಗಾಗಿದ್ದೇನೆ ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ. ಈ ನಡುವೆ ಸ್ವಾಮೀಜಿಯದ್ದು ಎನ್ನಲಾದ ಖಾಸಗಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
​ಪ್ರತಿಷ್ಠಿತ ಪೀಠದ ಪೀಠಾಧಿಪತಿಗಳ ಮೇಲೆ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಮಹಿಳಾ ಆಯೋಗದ ಮುಂದಿನ ಕ್ರಮ ಕುತೂಹಲ ಮೂಡಿಸಿದೆ. ಮೀಸಲಾತಿ ಹೋರಾಟದ ಮೂಲಕ ಗುರುತಿಸಿಕೊಂಡಿದ್ದ ಸ್ವಾಮೀಜಿಯವರ ವಿರುದ್ಧ ದಾಖಲಾಗಿರುವ ಈ ದೂರಿನ ಕುರಿತು ಮಠದ ಕಡೆಯಿಂದ ಅಥವಾ ಸ್ವಾಮೀಜಿಯವರಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ.










































































































error: Content is protected !!
Scroll to Top