ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಶ್ರೇಯಾಂಕ್ ಆರ್. ಶೆಟ್ಟಿ ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಒಟ್ಟು 600 ಅಂಕಗಳಿಗೆ 592 ಅಂಕಗಳನ್ನು ಗಳಿಸುವ ಮೂಲಕ ಶ್ರೇಯಾಂಕ್ ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಹಾಗೂ ಹೆತ್ತವರಿಗೆ ಕೀರ್ತಿ ತಂದಿದ್ದಾರೆ.
ಪ್ರತಿಭಾನ್ವಿತ ಸಾಧಕ:
ಬಜೆಗೋಳಿಯ ಉದ್ಯಮಿ ಡಾ. ರವೀಂದ್ರ ಶೆಟ್ಟಿ ಹಾಗೂ ರೂಪಾ ಆರ್. ಶೆಟ್ಟಿ ದಂಪತಿಯ ಪುತ್ರನಾಗಿರುವ ಶ್ರೇಯಾಂಕ್, ಆರಂಭದಿಂದಲೂ ಓದಿನಲ್ಲಿ ಮುಂದಿದ್ದರು. ಪರೀಕ್ಷೆಯ ತಯಾರಿಯ ಬಗ್ಗೆ ಮಾತನಾಡಿದ ಅವರು, “ನಿರಂತರ ಅಭ್ಯಾಸ ಮತ್ತು ಕಾಲೇಜಿನ ಉಪನ್ಯಾಸಕರ ಮಾರ್ಗದರ್ಶನ ನನ್ನ ಈ ಯಶಸ್ಸಿಗೆ ಕಾರಣ” ಎಂದು ಸಂತಸ ಹಂಚಿಕೊಂಡಿದ್ದಾರೆ.
ಪಿಯುಸಿ ಫಲಿತಾಂಶ: ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದ ಆಳ್ವಾಸ್‌ನ ಶ್ರೇಯಾಂಕ್ ಶೆಟ್ಟಿ




















