ಅಗ್ರ 10ರೊಳಗೆ ಸ್ಥಾನ ಪಡೆದ ಕ್ರೈಸ್ಟ್‌ಕಿಂಗ್‌ನ 12 ವಿದ್ಯಾರ್ಥಿಗಳು

ಕಾರ್ಕಳ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್‌ ಪದವಿಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಅಗ್ರ 10ರೊಳಗೆ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದ ಪ್ರಜ್ವಲ್ ಶೆಟ್ಟಿ ಹಾಗೂ ಶ್ರೀಮಾ ದೇವಾಡಿಗ 596 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ತಮ್ಮದಾಗಿಸಿಕೊಂಡಿದ್ದಾರೆ. ಜೊತೆಗೆ ಮದಿಹಾ ಫಾತಿಮಾ 594, ಜಿತೇಶ್ ಪಿಂಟೊ 593, ಮಹಿಪಾಲ್ ಸಿಂಗ್ 589 ಹಾಗೂ ಮನೋಜ್ ಪೈ 589 ಅಂಕಗಳನ್ನು ಪಡೆದುಕೊಂಡು ರಾಜ್ಯದ ಅಗ್ರ ಹತ್ತರಲ್ಲಿ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಸ್ಮೃತಿ ಮರಾಠೆ 592 ಅಂಕಗಳನ್ನು ಪಡೆದುಕೊಂಡಿದ್ದಾರೆ. ಸಿಯಾ ವೆನಿಶಾ ಡಿ’ಸೋಜಾ 591, ವಿಜೇತ್ ಆರ್. ಶೆಟ್ಟಿಗಾರ್ 591, ಮೊಹಮ್ಮದ್ ಮಾಶಿದ್ 590, ರೋಶನ್ ಥೋರಸ್ 590 ಹಾಗೂ ಅಪೇಕ್ಷಾ ಜೈನ್ 589 ಅಂಕಗಳನ್ನು ಪಡೆದುಕೊಂಡು ರಾಜ್ಯದಲ್ಲಿ ಅಗ್ರ ಹತ್ತರೊಳಗೆ ಸ್ಥಾನ ಪಡೆದಿದ್ದಾರೆ. ಉಳಿದಂತೆ ವಾಣಿಜ್ಯ ವಿಭಾಗದಲ್ಲಿ ಒಟ್ಟು 123 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 94 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ 29 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ ಒಟ್ಟು 156 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರ ಪೈಕಿ 112 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ 44 ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದುಕೊಂಡಿದ್ದಾರೆ. 149 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿದ್ದಾರೆ. ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ದರ್ಜೆಗಿಂತ ಅಧಿಕ ಅಂಕದೊಂದಿಗೆ ಉತ್ತೀರ್ಣಗೊಂಡಿರುವುದು ವಿಶೇಷ ಸಾಧನೆಯಾಗಿದೆ.







































error: Content is protected !!
Scroll to Top