ಹೆಬ್ರಿ: ರಸ್ತೆ ದಾಟುತ್ತಿದ್ದ ಶಾಲಾ ವಿದ್ಯಾರ್ಥಿನಿಯರಿಗೆ ಅತಿವೇಗವಾಗಿ ಬಂದ ಮಿನಿ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಮೃತಳನ್ನು ಪ್ರೀತಿ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಅರ್ಪಣಾ ಎಂಬ ಮತ್ತೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169A ರ ಹೆಬ್ರಿ ಎಸ್.ಆರ್. ಶಾಲೆಯ ಮುಂಭಾಗ ಈ ದುರ್ಘಟನೆ ಸಂಭವಿಸಿದೆ. ಉಡುಪಿ ಕಡೆಯಿಂದ ಬಸ್‌ನಲ್ಲಿ ಬಂದಿದ್ದ ವಿದ್ಯಾರ್ಥಿನಿಯರು ಶಾಲೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ, ಅದೇ ದಿಕ್ಕಿನಿಂದ ವಿರುದ್ಧ ದಿಕ್ಕಿನಲ್ಲಿ ಅತಿವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಪ್ರೀತಿ ಮೃತಪಟ್ಟಿದ್ದಾರೆ. ಚಾಲಕ ನಾರಾಯಣಪ್ಪ ಎಂಬಾತನ ಅಜಾಗರೂಕ ಚಾಲನೆಯೇ ಈ ಘಟನೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೂಡ್ಸ್ ವಾಹನ ಡಿಕ್ಕಿ; ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಸಾವು



















