ಕಾರ್ಕಳ : ಸುದೀಪ್ ಶೆಟ್ಟಿ ಆತ್ಮಹತ್ಯೆ ಸಂಬಂಧ ಬಂಧಿತಳಾಗಿರುವ ಆತನ ಪತ್ನಿ ಸೌಮ್ಯ ಶೆಟ್ಟಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸುದೀಪ್ ಶೆಟ್ಟಿ ತಂದೆ ಕಾರ್ಕಳ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಂಧಿತಳಾಗಿದ್ದ ಸೌಮ್ಯಳನ್ನು ಎ. 11ರಂದು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸೌಮ್ಯ ಶೆಟ್ಟಿಯನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿದೆ.
ಸೌಮ್ಯ ಶೆಟ್ಟಿಗೆ 14 ದಿನಗಳ ನ್ಯಾಯಾಂಗ ಬಂಧನ































