ಕಾರ್ಕಳ : ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಕಾರ್ಕಳ ಶಾಸಕರ ಜನಸೇವಾ ಕಚೇರಿಯಲ್ಲಿ ಆಚರಿಸಲಾಯಿತು. ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಪಕ್ಷದ ವಕ್ತಾರ, ನ್ಯಾಯವಾದಿ ರವಿಂದ್ರ ಮೊಯ್ಲಿಯವರು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಕೇವಲ ಒಂದು ಸಮುದಾಯದ ನಾಯಕರಲ್ಲ, ಅವರು ಇಡೀ ರಾಷ್ಟ್ರದ ಆಸ್ತಿ. ಸಮಾನತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಕುರಿತಾದ ಅವರ ಆಶಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ನಿರಂಜನ್ ಜೈನ್, ಪುರಸಭಾ ಮಾಜಿ ಅಧ್ಯಕ್ಷೆ ಸುಮಾ ಕೇಶವ್, ಪುರಸಭಾ ಸದಸ್ಯರು, ಎಸ್‌ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ಕಾರ್ಲ, ವಿವಿಧ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಕಾಸ ಜನಸೇವಾ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ





































