ಅಂಬೇಡ್ಕರ್ ಮೆರವಣಿಗೆ ಮೇಲೆ ಕಾರು ಚಲಾಯಿಸಿದ ಮದ್ಯ ವ್ಯಸನಿ- ಮಗು ಸಾವು

ಚಿಕ್ಕಮಗಳೂರು : ಅಂಬೇಡ್ಕರ್ ಮೆರವಣಿಗೆಯಲ್ಲಿದ್ದವರ ಮೇಲೆ ಕಾರು ಹರಿದು 7 ವರ್ಷದ ಮಗು ಸಾನ್ವಿ ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ಮಂಗಳವಾರ ರಾತ್ರಿ‌ 11.30ರ ವೇಳೆಗೆ ಸಂಭವಿಸಿದೆ. ಘಟನೆಯಿಂದ 7 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಲಕ ಮದ್ಯವ್ಯಸನ ಮಾಡಿ ಕಾರು ಚಲಾಯಿಸಿರುವುದು ದುರ್ಘಟನೆಗೆ ಕಾರಣ ಎನ್ನಲಾಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಅಪಘಾತದ ಬಳಿಕ ಕಾರಿನಲ್ಲಿದ್ದ ಮತ್ತೋರ್ವ ಪರಾರಿಯಾಗಿದ್ದಾನೆ.
ಘಟನೆ ಬಳಿಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಮುಂಭಾಗ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಕಾರು ಚಾಲಕನನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲು ಮುಂದಾದಾಗ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರು ಚಾಲಕ ಚೆನ್ನಾಗಿದ್ದಾನೆ, ಗಾಯಾಳುಗಳ ಕಡೆ ಗಮನ ಹರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ 50 ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ ನೀಡಲಾಗಿದೆ.





























































































































error: Content is protected !!
Scroll to Top