180 ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ – ಅಮರಾವತಿ ಬೆಚ್ಚಿಬೀಳಿಸಿದ ಅಯಾನ್ ಅಹ್ಮದ್ ಕೃತ್ಯ

​ಅಮರಾವತಿ : ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವಂತಹ ದೌರ್ಜನ್ಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸುಮಾರು 180ಕ್ಕೂ ಹೆಚ್ಚು ಅಪ್ರಾಪ್ತ ಬಾಲಕಿಯರನ್ನು ವಂಚಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ತೀವ್ರತೆಗೆ ಆಕ್ರೋಶಗೊಂಡ ಆಡಳಿತ ಮಂಡಳಿಯು ಆರೋಪಿಯ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸಿದೆ.

ಅಮರಾವತಿಯ ಪರತ್ವಾಡ ನಿವಾಸಿ ಅಯಾನ್ ಅಹ್ಮದ್ (ತನ್ವೀರ್ ಅಹ್ಮದ್) ಬಂಧಿತ ಆರೋಪಿ. ಈತ ಸಾಮಾಜಿಕ ಜಾಲತಾಣಗಳ ಮೂಲಕ ಮತ್ತು ಸ್ಥಳೀಯವಾಗಿ ಅಪ್ರಾಪ್ತ ಬಾಲಕಿಯರನ್ನು ಪರಿಚಯ ಮಾಡಿಕೊಂಡು, ಪ್ರೀತಿಯ ಜಾಲಕ್ಕೆ ಬೀಳಿಸುತ್ತಿದ್ದ ಎನ್ನಲಾಗಿದೆ. ಅನಂತರ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುತ್ತಿದ್ದ ಎಂಬ ಆಘಾತಕಾರಿ ವಿಚಾರ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.‌

ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಆತನ ಮೊಬೈಲ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಪರಿಶೀಲಿಸಿದಾಗ ದಿಗಿಲುಗೊಳಿಸುವ ಮಾಹಿತಿಗಳು ಲಭ್ಯವಾಗಿವೆ. ​ಆರೋಪಿಯ ಬಳಿ ಸುಮಾರು 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ದೌರ್ಜನ್ಯಕ್ಕೊಳಗಾದ ಬಾಲಕಿಯರನ್ನು ವಿಡಿಯೋ ತೋರಿಸಿ ಬೆದರಿಸುತ್ತಿದ್ದ ಎನ್ನಲಾಗಿದೆ.

​ಪ್ರಕರಣದ ಸುದ್ದಿ ಹರಡುತ್ತಿದ್ದಂತೆ ಪರತ್ವಾಡ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಹಿಂದೂ ಸಂಘಟನೆಗಳು ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾವೆ. ​ಸಾರ್ವಜನಿಕರ ಆಕ್ರೋಶ ಮತ್ತು ಕೃತ್ಯದ ಗಂಭೀರತೆಯನ್ನು ಪರಿಗಣಿಸಿದ ಸ್ಥಳೀಯ ಆಡಳಿತವು, ಅಕ್ರಮವಾಗಿ ನಿರ್ಮಿಸಲಾಗಿದ್ದ ಆರೋಪಿಯ ಮನೆಯನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಿದೆ. ಇದು ಅಪರಾಧಿಗಳಿಗೆ ಎಚ್ಚರಿಕೆಯ ಸಂದೇಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ​ಮುನ್ನೆಚ್ಚರಿಕಾ ಕ್ರಮವಾಗಿ ಅಮರಾವತಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.





























































































































error: Content is protected !!
Scroll to Top