ಬೆಂಗಳೂರು : ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಕಾರ್ಕಳದ ಆಯುಷ್ ಶೆಟ್ಟಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಎ. 16ರಂದು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ವಿಧಾನಪರಿಷತ್ ಸದಸ್ಯ ಗೋವಿಂದರಾಜು, ಆಯುಶ್ ಶೆಟ್ಟಿಯವರ ತಂದೆ ರಾಮ ಪ್ರಕಾಶ್ ಶೆಟ್ಟಿ, ತಾಯಿ ಶಾಲ್ಮಲಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಆಯುಶ್ ಶೆಟ್ಟಿಯವರು ಚೀನಾದ ನಿಂಗ್ಬೋದಲ್ಲಿ ನಡೆದ ಸೆಮಿಫೈನಲ್ ಪಂದ್ಯಾಟದಲ್ಲಿ ವಿಶ್ವದ ನಂ. 1 ಆಟಗಾರ ಕುನ್ಲಾವುತ್ ವಿಟಿಡ್ಸರ್ನ್ ಅವರನ್ನು ಭರ್ಜರಿಯಾಗಿ ಸೋಲಿಸಿ ಪೈನಲ್ ಪ್ರವೇಶಿಸಿದ್ದರು. ಆಯುಷ್ ಬೆಳ್ಳಿ ಗೆಲ್ಲುವ ಮೂಲಕ 61 ವರ್ಷದ ಬಳಿಕ ಭಾರತಕ್ಕೆ ಈ ಪದಕ ದೊರೆತಂತಾಗಿದೆ.































































