ಅಂಬೇಡ್ಕರ್ ಜಯಂತಿ ಆಚರಣೆಗೆ ಶಾಸಕರ ಗೈರು : ದಲಿತ ಮುಖಂಡರ ಬೇಸರ

ಕಾರ್ಕಳ : ಕಾಬೆಟ್ಟುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನದಲ್ಲಿ ಕಾರ್ಕಳ ತಾಲೂಕು ಆಡಳಿತ ವತಿಯಿಂದ ಮೊದಲ ಬಾರಿಗೆ ಹಮ್ಮಿಕೊಳ್ಳಲಾದ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಗೈರು ಹಾಜರಾಗಿರುವುದಕ್ಕೆ ದಲಿತ ಸಮಾಜದ ಮುಖಂಡರು ಬೇಸರ ವ್ಯಕ್ತಪಡಿಸಿರುತ್ತಾರೆ. ಶಾಸಕರು ತನ್ನ ಪಕ್ಷದ ಕಚೇರಿಯಲ್ಲಿದ್ದರೂ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸದೇ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮಾತ್ರವಲ್ಲ ಇಡೀ ದಲಿತ ಸಮಾಜವನ್ನು ಅವಮಾನಿಸಿದ್ದಾರೆ. ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಶಾಸಕರ ಮೊದಲ ಕರ್ತವ್ಯವಾಗಿದೆ. ಅವರು ತಮ್ಮ ಕರ್ತವ್ಯ ನಿರ್ವಹಿಸುವ ಬದಲಾಗಿ ಅಸಡ್ಡೆ ತೋರಿರುವುದು ಖೇದಕರ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಂವಿಧಾನ ರಚನೆಯಿಂದ ಭಾರತದಲ್ಲಿ ಸಮಾನತೆಯನ್ನು ಕಲ್ಪಿಸಿದ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಅವಮಾನಿಸುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿದ್ದು ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾರ್ಕಳ ಶಾಸಕರು ತನ್ನ ಕಚೇರಿಯಿಂದ ಸ್ವಲ್ಲವೇ ದೂರದಲ್ಲಿರುವ ಅಂಬೇಡ್ಕರ್ ಭವನಕ್ಕೆ ಆಗಮಿಸದೇ ಇರುವುದು ನಮಗೆ ಅತ್ಯಂತ ಬೇಸರ ಉಂಟು ಮಾಡಿದೆ. ಮುಂದಿನ ದಿನದಲ್ಲಿ ಶಾಸಕರು ತಮ್ಮ ತಪ್ಪನ್ನು ತಿದ್ದಿಗೊಳ್ಳದಿದ್ದರೆ ಅವರು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳನ್ನು ಬಹಿಷ್ಕರಿಸಲಾಗುವುದು ಎಂದು ದಲಿತ ಮುಖಂಡ ಅಣ್ಣಪ್ಪ ನಕ್ರೆ ಹಾಗೂ ವಕೀಲ ರಾಘವ ಕುಕ್ಕುಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























































































































error: Content is protected !!
Scroll to Top