ಮಾರಕಾಸ್ತ್ರದೊಂದಿಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ

ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಮುಖಕ್ಕೆ ಬಟ್ಟೆ ಕಟ್ಟಿ, ಮಾರಕಾಸ್ತ್ರದೊಂದಿಗೆ ಅನುಮಾನಾಸ್ಪದವಾಗಿ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
​ಕೊಪ್ಪಳ ಜಿಲ್ಲೆಯ ಗಂಗಾವತಿಯ ಹನುಮಪ್ಪ (29) ಹಾಗೂ ಕನಕಗಿರಿ ತಾಲೂಕಿನ ಮರಿಯಪ್ಪ (32) ಬಂಧಿತ ಆರೋಪಿಗಳು.
ಘಟನೆಯ ವಿವರ:
​ಗುರುವಾರ ರಾತ್ರಿ ನಗರ ಪೊಲೀಸ್ ಉಪನಿರೀಕ್ಷಕ ಮುರಳೀಧರ ನಾಯ್ಕ್ ಹಾಗೂ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ರಾತ್ರಿ 8:10ರ ಸುಮಾರಿಗೆ ಕಾರ್ಕಳ ಬಸ್‌ ನಿಲ್ದಾಣದ ಸಮೀಪವಿರುವ ಹೂವಿನ ಅಂಗಡಿಯ ಎದುರಿನ ಗೂಡಂಗಡಿಯ ಹಿಂಭಾಗದಲ್ಲಿ ಈ ಇಬ್ಬರು ವ್ಯಕ್ತಿಗಳು ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕೈಯಲ್ಲಿ ಚೂರಿ ಹಿಡಿದು ಅಡಗಿಕೊಂಡಿದ್ದರು.
​ಪೊಲೀಸರನ್ನು ಕಂಡೊಡನೆ ಇವರು ಸಮರ್ಪಕ ಉತ್ತರ ನೀಡದೆ ಪರಾರಿಯಾಗಲು ಯತ್ನಿಸಿದ್ದಾರೆ. ಯಾವುದೋ ಅಪರಾಧ ಕೃತ್ಯ ಎಸಗುವ ಇರಾದೆಯಿಂದ ಇವರು ಸ್ಥಳದಲ್ಲಿ ಬೀಡುಬಿಟ್ಟಿದ್ದರು ಎಂಬ ಸಂಶಯದ ಮೇರೆಗೆ ರಾತ್ರಿ 8:20ಕ್ಕೆ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ವಿರುದ್ಧ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





























































error: Content is protected !!
Scroll to Top