ಕಾರ್ಕಳ : ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ರೇಶ್ಮಾ ಉದಯ ಶೆಟ್ಟಿ ಅವರ ಪತಿ ಇನ್ನಾ ಗ್ರಾಮದ ಉದಯ ಶೆಟ್ಟಿ (55) ಅವರು ಎ. 17ರಂದು ನಿಧನ ಹೊಂದಿದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಉದಯ ಶೆಟ್ಟಿ ಅವರು ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ ರೇಶ್ಮಾ ಉದಯ ಶೆಟ್ಟಿ ಪುತ್ರಿ ಮನು ಶೆಟ್ಟಿ ಅವರನ್ನು ಅಗಲಿದ್ದಾರೆ.
ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಅವರು ಜೇಸಿಐ ವಲಯ ಅಧ್ಯಕ್ಷರಾಗಿ, ಬೆಳ್ಮಣ್ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದರು.
ಮೃತರ ಅಂತ್ಯಸಂಸ್ಕಾರ ಶನಿವಾರ ಇನ್ನಾದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.






























































