ಎ. 18 : ಉಷಾ ಲಕ್ಷ್ಮೀ ಜ್ಯುವೆಲ್ಲರ್ಸ್‌ ಉದ್ಘಾಟನೆ

ಕಾರ್ಕಳ : ಕಾರ್ಕಳ ರಥಬೀದಿಯಲ್ಲಿ ನವೀಕೃತಗೊಂಡಿರುವ ಉಷಾ ಲಕ್ಷ್ಮೀ ಜ್ಯುವೆಲ್ಲರ್ಸ್‌ ಮಳಿಗೆಯು ಎ. 18ರ ಶನಿವಾರ ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಶ್ರೀದೇವಿ ಕ್ಯಾಶ್ಯೂ ಇಂಡಸ್ಟ್ರೀಸ್‌ನ ಗಣೇಶ್ ಕಾಮತ್ ಮಳಿಗೆ ಉದ್ಘಾಟಿಸಲಿರುವರು. ಶಾಸಕ ವಿ. ಸುನಿಲ್ ಕುಮಾರ್, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು, ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ರಾಮಚಂದ್ರ ಆಚಾರ್ಯ, ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಪುರಸಭಾ ನಿಕಟಪೂರ್ವ ಅಧ್ಯಕ್ಷ ಯೋಗೀಶ್‌ ದೇವಾಡಿಗ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶುಭದ ರಾವ್, ಪುರಸಭಾ ಸದಸ್ಯೆ ಶೋಭಾ ಆರ್.‌ ದೇವಾಡಿಗ, ಸುರಕ್ಷಾ ಸೇವಾ ಆಶ್ರಮದ ಆಯಿಷಾ ಬಾನು ಉಪಸ್ಥಿತರಿರುವರು ಎಂದು ಉಷಾ ಜ್ಯುವೆಲ್ಲರ್ಸ್‌ ಪ್ರಕಟಣೆಯಲ್ಲಿ ತಿಳಿಸಿದೆ.

































































error: Content is protected !!
Scroll to Top