ಎಸ್ಸೆಲ್ಸಿಸಿ ಫಲಿತಾಂಶ ಪ್ರಕಟ – ಕರಾವಳಿಯದ್ದೇ ಪಾರುಪತ್ಯ

ಬೆಂಗಳೂರು : ಎಸ್ಸೆಲ್ಸಿಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಕರಾವಳಿಯ ಮೂರು ಜಿಲ್ಲೆಗಳು ಮೊದಲ ಮೂರು ಸ್ಥಾನ ಗಳಿಸಿದೆ. ಕಲಬುರಗಿ ಕೊನೆಯ ಸ್ಥಾನದಲ್ಲಿದೆ. ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಈ ಬಾರಿ ಪರೀಕ್ಷೆ ಬರೆದ ಶೇಕಡಾ 94.1ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ ಹಾಗೂ ಉತ್ತರ ಕನ್ನಡ 3ನೇ ಸ್ಥಾನ ಪಡೆದುಕೊಂಡಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. 7.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 5 ಸಾವಿರ ವಿದ್ಯಾರ್ಥಿಗಳು ಗೈರಾಗಿದ್ದರು. 7.7 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದಕ್ಷಿಣ ಕನ್ನಡ – ಶೇ 98.4, ಉಡುಪಿ – ಶೇ 98.18, ಉತ್ತರ ಕನ್ನಡ – ಶೇ 98.02, ಹಾಸನ – ಶೇ 97.51, ಮಂಡ್ಯ – ಶೇ 97.4 ಕ್ರಮವಾಗಿ ಜಿಲ್ಲಾವಾರು ಫಲಿತಾಂಶ ದಾಖಲಿಸಿದೆ. ದಾವಣಗೆರೆಯ ಭರತ್‌, ರಾಯಚೂರಿನ ಸುಖದೇವ್, ಚಿಕ್ಕೋಡಿಯ ಪ್ರಾರ್ಥನಾ, ಚಿಕ್ಕಮಗಳೂರಿನ ಬೃಂದಾ, ಉಡುಪಿಯ ಪ್ರೀತಂ, ವಿಜಯಪುರದ ಸೌಜನ್ಯ, ಬೆಂಗಳೂರು ಉತ್ತರ ಧನುಷ್‌ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಫಲಿತಾಂಶಕ್ಕಾಗಿ https://karresults.nic.in/ ಲಿಂಕ್‌ಗೆ ಭೇಟಿ ನೀಡಬಹುದು.











































































error: Content is protected !!
Scroll to Top