ರಾಜ್ಯಕ್ಕೆ 6ನೇ ಸ್ಥಾನ ಪಡೆದ ಮೊಹಮ್ಮದ್ ಅರ್ಮಾನ್ ಶಾಹೀದ್
ಕಾರ್ಕಳ : ಕುಕ್ಕುಂದೂರು ಕೆ.ಎಂ.ಇ.ಎಸ್. ಶಿಕ್ಷಣ ಸಂಸ್ಥೆಗೆ 2025-26 ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ. 100 ಫಲಿತಾಂಶ ದಾಖಲಾಗಿದೆ. 619 ಅಂಕ ಪಡೆದ ಮೊಹಮ್ಮದ್ ಅರ್ಮಾನ್ ಶಾಹೀದ್ ರಾಜ್ಯಕ್ಕೆ 6ನೇ ಸ್ಥಾನ ಗಳಿಸಿದ್ದಾರೆ. 607 ಅಂಕ ಪಡೆದ ಕೃತಿಕಾ ವಿ. ನಾಯಕ್ ಸಂಸ್ಥೆಗೆ ದ್ವಿತೀಯ ಸ್ಥಾನಿಯಾಗಿದ್ದಾರೆ.
21 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ಓರ್ವ ವಿದ್ಯಾರ್ಥಿಯು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಉತ್ತಮ ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿಗಳನ್ನು, ಶಿಕ್ಷಕರನ್ನು, ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್. ಇಮ್ತಿಯಾಜ್ ಅಹಮ್ಮದ್ ಅಭಿನಂದಿಸಿದ್ದಾರೆ.







































