ಗಾಂಧಿ ಮೈದಾನ ಬಳಿಯ ಶಾಂಭವಿ ಡಿವೈನ್‌ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ

ಕಾರ್ಕಳ : ಗಾಂಧಿ ಮೈದಾನ ಬಳಿಯ ಶಾಂಭವಿ ಡಿವೈನ್‌ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯ ಮನೆಯೊಂದರಲ್ಲಿ ಎ. 23ರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಎಸಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿ ದುರ್ಘಟನೆ ನಡೆದಿದೆ ಎನ್ನಲಾಗಿದ್ದು ಪರಿಣಾಮ 5 ಲಕ್ಷ ರೂ. ನಷ್ಟ ಸಂಭವಿಸಿದೆ.
ಸಂದೀಪ್‌ ಹೆಗ್ಡೆ ಅವರ ಮನೆಯಲ್ಲಿ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಮನೆ ಹಾಲ್‌ನಲ್ಲಿದ್ದ ಟಿವಿ ಸೇರಿದಂತೆ ಪರಿಕರಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರಿ ಅನಾಹುತವೊಂದು ತಪ್ಪಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾತ್ರಿ 12:30ರಿಂದ 2:30ರವರೆಗೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಲ್ಲಿ ನೆರೆದವರ ಕಾರ್ಯಾಚರಣೆಯಿಂದಾಗಿ ಹೆಚ್ಚಿನ ಹಾನಿ ತಪ್ಪಿದೆ.









































































error: Content is protected !!
Scroll to Top