ಬೈಕ್‌ಗಳ ಮುಖಾಮುಖಿ ಢಿಕ್ಕಿ; ಮೂವರಿಗೆ ಗಾಯ

ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಬಳಿ ಬೆಳ್ಮಣ್–ಕಿನ್ನಿಗೋಳಿ ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.
​ಕಿನ್ನಿಗೋಳಿ ಕಡೆಯಿಂದ ಬೆಳ್ಮಣ್ ಕಡೆಗೆ ತೆರಳುತ್ತಿದ್ದ ಸವಾರ ಅಮರನಾಥ್ ಎಂಬಾತ ತನ್ನ ವಾಹನವನ್ನು ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಢಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ಬೆಳ್ಮಣ್ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಸವಾರ ರಮೇಶ್ ಅವರಿಗೆ ತಲೆಯ ಭಾಗಕ್ಕೆ ತೀವ್ರ ರಕ್ತಗಾಯವಾಗಿದೆ.
​ಅಪಘಾತದ ರಭಸಕ್ಕೆ ಎರಡೂ ವಾಹನಗಳು ರಸ್ತೆಗೆ ಬಿದ್ದಿದ್ದು, ಬೈಕ್‌ನ ಹಿಂಬದಿ ಸವಾರ ಮಹಿಳೆ ಸುಭಾಷಿಣಿ ಹಾಗೂ ಅಪಘಾತಕ್ಕೆ ಕಾರಣವಾದ ಸವಾರ ಅಮರನಾಥ್‌ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಗೇಶ್ ರಾಠೋಡ್ ನೀಡಿದ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













































































error: Content is protected !!
Scroll to Top