ಮಿಯ್ಯಾರು ಕಾರೋಲ್ ಗುಡ್ಡೆ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ: 26 ರಂದು ಭವ್ಯ ‘ಹಸಿರುವಾಣಿ’ ಹೊರೆಕಾಣಿಕೆ ಮೆರವಣಿಗೆ

ಕಾರ್ಕಳ: ಮಿಯ್ಯಾರಿನ ಕಾರೋಲ್ ಗುಡ್ಡೆ ಪ್ರಸಿದ್ಧ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಏಪ್ರಿಲ್ 26ರ ಭಾನುವಾರ ಸಂಜೆ 4 ಗಂಟೆಗೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆ ನಡೆಯಲಿದೆ.
​ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಡುವ ಈ ಮೆರವಣಿಗೆಯು ಸಾಂಪ್ರದಾಯಿಕ ಕಲೆಗಳು ಹಾಗೂ ವಾದ್ಯಗೋಷ್ಠಿಗಳೊಂದಿಗೆ ಸಾಗಲಿದ್ದು, ಭಕ್ತರು ಸಮರ್ಪಿಸುವ ದವಸ-ಧಾನ್ಯಗಳ ಹೊರೆಕಾಣಿಕೆಯು ಕ್ಷೇತ್ರದ ಧಾರ್ಮಿಕ ವಿಧಿವಿಧಾನಗಳಿಗೆ ಬಳಕೆಯಾಗಲಿದೆ.
ಗಣ್ಯರ ಉಪಸ್ಥಿತಿ:
ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ. ಗಣಪತಿ ಹೆಗ್ಡೆ ಬೋರ್ಕಟ್ಟೆ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕ ಹರಿದಾಸ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತಾರಾನಾಥ ಕೋಟ್ಯಾನ್ ಉಪಸ್ಥಿತರಿರುವರು.
​ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸತ್ಯೇಂದ್ರ ನಾಯಕ್, ಕಾರ್ಯದರ್ಶಿ ಕಿಶೋರ್ ಶೆಟ್ಟಿ ಮಿಯ್ಯಾರು ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಕೀರ್ತಿ ಶೆಟ್ಟಿ ಸೇರಿದಂತೆ ಸಮಿತಿಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಜೀರ್ಣೋದ್ಧಾರ ಕಾರ್ಯದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ























































error: Content is protected !!
Scroll to Top