ಕಾರ್ಕಳ : ಎ. 28ರವರೆಗೆ ಕರಾವಳಿಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬೇಸಿಲಿನ ಬೇಗೆ ವಿಪರೀತವಾಗಿದೆ. ಸಂಜೆ ವೇಳೆ ಮೋಡ ಕವಿದ ವಾತಾವರಣ ಗೋಚರಿಸುತ್ತಿದೆ. ಎ. 22ರಂದು ಕಾರ್ಕಳದ ವಿವಿಧೆಡೆ ಮಳೆಯಾಗಿತ್ತು.
ಎ. 28ರವರೆಗೆ ಕರಾವಳಿಯಲ್ಲಿ ಮಳೆ ಸಾಧ್ಯತೆ















































