ಕಾರ್ಕಳ : ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯು ಶೇ. 100 ಫಲಿತಾಂಶ ದಾಖಲಿಸಿದೆ. ಕನ್ನಡ ಮಾಧ್ಯಮ ವಿಭಾಗದಲ್ಲಿ 34 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಆಂಗ್ಲ ಮಾಧ್ಯಮ ವಿಭಾಗದಲ್ಲಿ 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮಕ್ಕಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ-ಶಿಕ್ಷಕೇತರರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಶ್ರೀಮದ್ ಭುವನೇಂದ್ರ ಪ್ರೌಢಶಾಲೆಗೆ ಶೇ. 100 ಫಲಿತಾಂಶ















































