ಪಿಯುಸಿ ಶಿಕ್ಷಣದೊಂದಿಗೆ ಸಿಇಟಿ, ನೀಟ್‌, ಜೆಇಇ ತರಬೇತಿಗೆ ಒಬಿಸಿ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಸತಿ ಸಹಿತ ಉಚಿತವಾಗಿ ಪಿ.ಯು.ಸಿ (ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ) ಶಿಕ್ಷಣದೊಂದಿಗೆ ನೀಟ್, ಜೆಇಇ ಮತ್ತು ಸಿಇಟಿ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಜಾತಿಗೆ ಸೇರಿರುವ, ಕುಟುಂಬದ ಒಟ್ಟು ವಾರ್ಷಿಕ ಆದಾಯ 8 ಲಕ್ಷ ರೂ. ಒಳಗಿರುವ ಹಾಗೂ ಎಸ್.ಎಸ್.ಎಲ್.ಸಿ ವ್ಯಾಸಾಂಗವನ್ನು ಸರಕಾರಿ ವಸತಿ ರಹಿತ ಶಾಲೆಯಲ್ಲಿ ಪೂರೈಸುವುದರೊಂದಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ 90 ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೆ ಮಹಡಿ, ಮಣಿಪಾಲ, ಉಡುಪಿ ದೂ. ಸಂಖ್ಯೆ: 0820-2574881 ಅಥವಾ ವೆಬ್‌ಸೈಟ್ https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.





























































































error: Content is protected !!
Scroll to Top