ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಕಾರ್ಕಳ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕಿಶನ್ ಕೆ. 597 ಅಂಕ ಪಡೆಯುವುದರೊಂದಿಗೆ ಕಾಮರ್ಸ್ ವಿಭಾಗದಲ್ಲಿ ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದಿದ್ದಾರೆ. ಈತ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಹ ಕೃಷ್ಣ ಕೆ. ಹಾಗೂ ಕಲಾವತಿ ದಂಪತಿಯ ಪುತ್ರ. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರ ಮಾರ್ಗದರ್ಶನವೇ ನನ್ನ ಯಶಸ್ಸಿಗೆ ಕಾರಣ ಎಂದು ಕಿಶನ್ ಸಂತೋಷ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಅಧ್ಯಾಪಕ ವರ್ಗ ಅಭಿನಂದಿಸಿದೆ.
ಪಿಯುಸಿ ಮರುಮೌಲ್ಯಮಾಪನ – ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದ ಶ್ರೀ ಭುವನೇಂದ್ರ ಕಾಲೇಜಿನ ಕಿಶನ್





