ತ್ರಾಸಿ : ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಉಡುಪಿ : ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕು ತ್ರಾಸಿಯ ಬೀಚ್ ಬಳಿ ಎ. 29ರ ಮಧ್ಯಾಹ್ನ ಸಂಭವಿಸಿದೆ. ಬಸ್ಸಿನಲ್ಲಿ ಶಿವಮೊಗ್ಗ ಜಿಲ್ಲೆ ಶಂಕರಘಟ್ಟ ರಂಭಾಪುರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳು ಪ್ರವಾಸ ತೆರಳಿದ್ದರು.
ಬಸ್ಸಿನಲ್ಲಿ 24 ವಿದ್ಯಾರ್ಥಿ, 23 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 50 ಮಂದಿಯಿದ್ದರು ಎಂದು ತಿಳಿದುಬಂದಿದೆ. ಇವರೆಲ್ಲ ಮುರ್ಡೇಶ್ವರಕ್ಕೆ ತೆರಳಿದ್ದು, ಅಲ್ಲಿಂದ ಬುಧವಾರ ಬೆಳಗ್ಗೆ ಉಡುಪಿ ಕಡೆ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ರಸ್ತೆ ಬದಿ ನಿಲ್ಲಿಸಿದ ಗ್ಯಾಸ್ ಟ್ಯಾಂಕರ್‌ಗೆ ಢಿಕ್ಕಿ ಹೊಡೆಯಿತು. ಬಳಿಕ ಅಲ್ಲೇ ಮುಂದೆ ನಿಲ್ಲಿಸಿದ ಗೂಡ್ಸ್ ಲಾರಿಗೂ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬಸ್ಸಿನ ಮುಂಭಾಗ ನುಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿದ್ದ ಕ್ಲೀನರ್ ಮತ್ತು ಅಡುಗೆ ಸಹಾಯಕರೊಬ್ಬರು ಮೃತಪಟ್ಟರೆಂದು ತಿಳಿದುಬಂದಿದೆ. ಉಳಿದಂತೆ ಹಲವು ವಿದ್ಯಾರ್ಥಿಗಳು ಗಾಯಗೊಂಡು ಕುಂದಾಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.









error: Content is protected !!
Scroll to Top